ಲಕ್ಷ್ಮೀ ಹೆಬ್ಬಾಳಕರ ಸತೀಶ ಕಾಲನ ಕಸಕ್ಕೂ ಸಮವಲ್ಲ : ರಮೇಶ ಜಾರಕಿಹೊಳಿ

0
98

ಕನ್ನಡಮ್ಮ ಸುದ್ದಿ-ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸತೀಶ ಜಾರಕಿಹೊಳಿಯ ಕಾಲನ ಕಸಕ್ಕೂ ಸಮವಲ್ಲ. ಮೊದಲ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇನೆ ಅಂತಾ ಧಿಮಾಕು ಬೇಡ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಮಂಗಳವಾರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಗೊಂದಲದ ಕುರಿತು ಪ್ರತಿಕ್ರಿಯೆ ನೀಡುವ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡುವುದು ಬೇಡ. ಅವರಿಗೆ ದೇವರು ಒಳ್ಳೆ ಬುದ್ಧಿ ನೀಡಲೆಂದು ಹೇಳಿದರು. ಇನ್ನು ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

loading...