ಲೋಕಸಭಾ ಚುನಾವಣೆಯಲ್ಲಿ ಯಶವಂತ ಸಿನ್ಹಾ ಸ್ಪರ್ಧಿಸುವಂತೆ ಕೇಜ್ರಿವಾಲ್ ಒತ್ತಾಯ

0
13

ನವದೆಹಲಿ: ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಆದಾಗ್ಯೂ, ಮಾಜಿ ವಿತ್ತ ಸಚಿವರು ಯಾವ ಪಕ್ಷದಿಂದ ಯಾವ  ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಯಾವುದೇ ಹೆಸರನ್ನೂ  ಹೇಳಿಲ್ಲ.

ಯಶವಂತ ಸಿನ್ಹಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ಮಾತನಾಡಿದ ಅರವಿಂದ್ ಕೇಜ್ರಿವಾಲ್,   ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಯಶವಂತ ಸಿನ್ಹಾ ಹೇಳಿದ್ದಾರೆ. ಆದರೆ. ನಿಮ್ಮಂತಹ ಒಳ್ಳೇಯ ವ್ಯಕ್ತಿಗಳೇ ಚುನಾವಣೆಗೆ ಸ್ಪರ್ಧಿಸದಿದ್ದರೆ ಮತ್ಯಾರು ಸ್ಪರ್ಧಿಸಬೇಕು, ಯಶವಂತ ಸಿನ್ಹಾ ಅವರು ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದ್ದು, ಅವರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

ಉತ್ತರ ಪ್ರದೇಶ ಎಎಪಿ ಉಸ್ತುವಾರಿ ಸಂಜಯ್ ಸಿಂಗ್  ನೇತೃತ್ವದಲ್ಲಿ ನಡೆದ ಪಾದಯಾತ್ರೆ ಪ್ರಯುಕ್ತ ಆಯೋಜಿಸಿದ್ದ ಜನ ಅಧಿಕಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ವಿದ್ಯುತ ದರ ನಿಯಂತ್ರಿಸಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.  ದೆಹಲಿಯಲ್ಲಿ 100 ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆಯಲಾಗಿದ್ದು, ಕಡಿಮೆ ಸುಂಕದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ದೇಶಾದ್ಯಂತ ಇದನ್ನು ಮಾಡಲು ಮೋದಿಗೆ ಏಕೆ ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

loading...