ಲೋಕಾಯುಕ್ತ ಎಸ್ಪಿಯಾಗಿ ಒಂಟಗೂಡಿ ಅಧಿಕಾರ ಸ್ವೀಕಾರ

0
60

ಬೆಳಗಾವಿ

ಲೋಕಾಯುಕ್ತ ಎಸ್ಪಿಯಾಗಿ ಯಶೋಧಾ ವಂಟಗೊಡಿ ಅವರು ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಬೆಳಗಾವಿ ನಗರ ಪೊಲೀಸ್ ನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಅವಧಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ತಮ್ಮ ಅಧೀನ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕಾರ್ಯ ಮಾಡಿದ್ದಾರೆ. ಕೊರೊನಾ ವೈರಸ್ ಹಾವಳಿಯಿಂದಾಗಿ ಹಗಲು ರಾತ್ರಿ ಎನ್ನದೇ ಪೊಲೀಸರು ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗಳ ಆರೋಗ್ಯ ದೃಷ್ಟಿಯಿಂದ ‌ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಗಳನ್ನು ಸಿಬ್ಬಂದಿ ಹಾಗೂ ಕುಟುಂಬಸ್ಥರಿಗೆ ವಿತರಿಸುವ ಮೂಲಕ ಸಿಬ್ಬಂದಿಯಲ್ಲಿ ಸ್ಥೈರ್ಯ ತುಂಬಿಸುವ ಕಾರ್ಯ ಮಾಡಿದ್ದರು.
ಸದ್ಯ ಕರ್ನಾಟಕ ಲೋಕಾಯುಕ್ತ ಬೆಳಗಾವಿ ವಿಭಾಗದ ಎಸ್ಪಿಯಾಗಿ ಯಶೋಧಾ ವಂಟಗೋಡಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಬೆಳಗಾವಿ ಜತೆಗೆ ಧಾರವಾಡ ಹಾಗೂ ವಿಜಯಪುರ ವಿಭಾಗದ ಎಸ್ಪಿಯಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ.

loading...