ವಿಪಕ್ಷ ನಾಯಕ ಸಿದ್ದರಾಮಯ್ಯಗೂ ಕೊರೋನಾ ಸೋಂಕು

0
30

ಬೆಂಗಳೂರು
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಸೋಮವಾರ ತಡರಾತ್ರಿ ರಾತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು ಕೋವಿಡ್ ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ವರದಿಯಾಗಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿದ್ದರಾಮಯ್ಯ ವಿನಂತಿ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ -19 ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದೆ.

 

loading...