ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಎಫ್‍ಐಆರ್

0
20

ಬೆಂಗಳೂರು: ವೋಟಿಗೆ ನೋಟು ನೀಡುವ ಆಮಿಷವೊಡ್ಡಿದ ಆರೋಪ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ನಗರದ 8ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಖಾಸಿಂಸಾಬ ಗದ್ವಾಲ್ ಪರವಾಗಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಬಿಜೆಪಿಗರು ಎರಡು ಸಾವಿರ ರೂಪಾಯಿ ಮೊತ್ತದ ಖೋಟಾನೋಟು ನೀಡುತ್ತಾರೆ. ಹೀಗಾಗಿ ಅವರಿಗೆ ವೋಟ್ ಕೊಡಬೇಡಿ.
ಕಾಂಗ್ರೆಸ್ ಅಭ್ಯರ್ಥಿ ಗದ್ವಾಲ್ ನೀಡುವ ನೂರರ ನೋಟ್ ಪಡೆದು ವೋಟ್ ಹಾಕಿ ಎಂದು ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಅನ್ಸಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ವೀಕ್ಷಕ ಪರಸಪ್ಪ ದೂರು ದಾಖಲಿಸಿದ್ದಾರೆ.
ಈ ನಡುವೆ ಎರಡು ಕಡೆ ಗುರುತಿತನ ಚೀಟಿ ಪಡೆದು ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ಜಿಲ್ಲೆಯ ಶಿವಾಜಿನಗರ ಕ್ಷೇತ್ರದಲ್ಲಿ ಇಬ್ರಾಹಿಂ ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಇಂದು ಪದ್ಮನಾಭರೆಡ್ಡಿ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿತು.
ಸಿ.ಎಂ. ಇಬ್ರಾಹಿಂ 2 ಕಡೆ ಗುರುತಿನ ಚೀಟಿ ಹೊಂದಿದ್ದರು, ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ತಕ್ಷಣವೇ ಅವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರ ಮತ್ತು ಬೆಂಗಳೂರು ನಗರ ಜಿಲ್ಲೆಯ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಇಬ್ರಾಹಿಂ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ. ವಿಧಾನಪರಿಷತ್ ಸದಸ್ಯನಾಗುವ ಆಸೆಯಿಂದ ಅವರು ಕಾನೂನು ಬಾಹಿರವಾಗಿ ಎರಡು ಕಡೆ ಗುರುತಿನ ಚೀಟಿ ಪಡೆದುಕೊಂಡಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದೆ.
ಜನರು ಒಂದೇ ಮತಗಟ್ಟೆಯಲ್ಲಿ ಗುರುತಿನ ಚೀಟಿ ಹೊಂದಲು ಅವಕಾಶವಿದೆ. ಕಾನೂನಿನ ಪ್ರಕಾರ ಎರಡು ವಿಳಾಸಗಳಲ್ಲಿ ಗುರುತಿನ ಚೀಟಿ ಹೊಂದುವುದು ಅಪರಾಧ. ಹೀಗಾಗಿ ಸಿ.ಎಂ. ಇಬ್ರಾಹಿಂ ಅವರು ಚುನಾವಣಾ ಆಯೋಗದ ಕಣ್ಣಿಗೆ ಮಣ್ಣೆರಚಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

loading...