ಶಿಕ್ಷಕರ ದಿನ: ಗುರು ಎ.ಜಿ. ರಾಮಚಂದ್ರ ರಾಯರನ್ನು ನೆನಪಿಸಿಕೊಂಡ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

0
10

ಬೆಂಗಳೂರು:- ತಮ್ಮ ಮುಂದಿನ‌ ತಲೆಮಾರಾಗಿರುವ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು ಸಮಸ್ತ ಶಿಕ್ಷಕರಿಗೆ ಶಿಕ್ಷಕರ ದಿನದ ಶುಭಾಶಯಗಳು. ಈ ಸಂದರ್ಭದಲ್ಲಿ ನನಗೆ ರಾಜಕೀಯದ ಪಾಠ ಕಲಿಸಿದ ನನ್ನ ಗುರುಗಳಾದ ಎ.ಜಿ. ರಾಮಚಂದ್ರ ರಾಯರನ್ನು ಸಹ ಮತ್ತೊಮ್ಮೆ ನೆನಪಿಸಿಕೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟ್ವೀಟ್ ಸಂದೇಶದ ಮೂಲಕ ತಿಳಿಸಿದ್ದಾರೆ.

ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಕಠಿಣ ಮತ್ತು ಜವಾಬ್ದಾರಿಯುತ ವೃತ್ತಿ. ಎಲ್ಲರ ಬದುಕು ಸಮರ್ಥವಾಗಿ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ಹಿರಿದು. ಭಾರತದಲ್ಲಿ ಸೆಪ್ಟೆಂಬರ್ 5ನ್ನು ಪ್ರತಿವರ್ಷ ಶಿಕ್ಷಕರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದರ್ಶ ಶಿಕ್ಷಕ, ಮಾಜಿ ರಾಷ್ಟ್ರಪತಿ, ಭಾರತ ರತ್ನಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಯಾಗಿ ಈ ದಿನವನ್ನು ಆಚರಿಸಲಾಗುತ್ತದೆ
ಇದು ನಮ್ಮ ಬದುಕನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದ, ಕೃತಜ್ಞತೆ ಸಲ್ಲಿಸಲು ಇರುವ ಅತ್ಯಂತ ಮಹತ್ವದ ದಿನವೂ ಹೌದು, ಹೀಗಾಗಿ, ಈ ಶುಭ ದಿನದಂದು ನಮಗೆ ಜೀವನವನ್ನು ರೂಪಿಸಿಕೊಳ್ಳಲು ಕಲಿಸಿದ ಎಲ್ಲಾ ಶಿಕ್ಷಕರಿಗೆ , ಶಿಕ್ಷಕರ ದಿನದ ಶುಭಾಶಯಗಳು ಎಂದು ದೇವೇಗೌಡ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಿಲ್ಪಿಗಳು. ನಮ್ಮೆಲ್ಲರ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಿಕ್ಷಕರನ್ನು ಕೃತಜ್ಞತಾ ಭಾವದೊಂದಿಗೆ ನೆನೆಯೋಣ. ನಾಡಿನ ಎಲ್ಲ ಶಿಕ್ಷಕರಿಗೂ ಶಿಕ್ಷಕರ ದಿನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

loading...