ಶಿಥಿಲಾವಸ್ಥೆ ಕಟ್ಟಡಗಳ ನವೀಕರಣ: ಸಚಿವ ವಿ.ಸೋಮಣ್ಣ

0
0

ಬೆಂಗಳೂರು:-ಕಳೆದ 10 ವರ್ಷಗಳಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಭಿವೃದ್ದಿ ಕಾಣದೆ ಗೋವಿಂದರಾಜನಗರ ವಾರ್ಡ್ ನ ಬಿ.ಬಿ.ಎಂ.ಪಿ ಕಟ್ಟಡ, ಸರ್ಕಾರಿ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದ್ದು, ಇವುಗಳನ್ನು ನವೀಕರಣ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಗೋವಿಂದರಾಜನಗರದ ವಾರ್ಡ್ ನಂಬರ್ 104ರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಪುನರ್ ನಿರ್ಮಾಣ ಮತ್ತು ಕೊಳವೆ ಬಾವಿ ಕಾಮಗಾರಿ, ಶಾಲ ಕಟ್ಟಡ ನವೀಕರಣ ಹಾಗೂ ಕ್ರೀಡಾ ಸಲಕರಣೆ ಆಳವಡಿಕೆ ಸೇರಿದಂತೆ ಸರಿಸುಮಾರು ಐದು ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಇಂದು ಗುದ್ದಲಿಪೂಜೆ ನೇರವೆರಿಸಿ ಮಾತನಾಡಿದರು.
ಮಕ್ಕಳಿಗೆ ಉತ್ತಮ ಪರಿಸರ ಇದ್ದಾಗ ಮಾತ್ರ, ಶಿಕ್ಷಣದಲ್ಲಿ ಆಸಕ್ತಿ ಮೂಡಲು ಸಾಧ್ಯ. ಗೋವಿಂದರಾಜನಗರ ವಾರ್ಡ್ ನ ಎರಡು ಶಾಲೆಗಳನ್ನು ಆಧುನೀಕರಣಗೊಳಿಸಿ ,ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆಯಲ್ಲಿ ಸಮಸ್ಯೆಗಳನ್ನು ಅಲಿಸಿ, ಸರ್ಕಾರಿ ಶಾಲಾ ಕಟ್ಟಡವನ್ನು ಖಾಸಗಿ ಶಾಲೆಗೆ ಸರಿಸಮಾನವಾಗಿ ನಿರ್ಮಿಸಲಾಗುವುದು ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಬಹುಮಹಡಿ ಕಟ್ಟಡವಾಗಿ ಪುನರ್ ನಿರ್ಮಾಣ ಮಾಡಲಾಗುವುದು. ಎಂ.ಸಿ.ಲೇಔಟ್ ಕೊಳಚೆ ನಿವಾಸಿಗಳಿಗೆ ಮೂರು ತಿಂಗಳ ಅವಧಿಯಲ್ಲಿ ನೂತನ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿ ಮಾತನಾಡಿ, ಗೋವಿಂದರಾಜನಗರ ವಾರ್ಡ್ ನಲ್ಲಿ ವಿ.ಸೋಮಣ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಣ, ಪರಿಸರ ಮತ್ತು ಆರೋಗ್ಯ, ಮಾಹಿತಿ ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾರ್ವಜನಿಕರ ಅವಶ್ಯಕತೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

loading...