ಸಂಘ ಪರಿವಾರದಿಂದ ನನಗೆ ಸಿಗುತ್ತಿರುವ ಬೆಂಬಲ ಕೆಲವರಿಗೆ ಸಹಿಸಲಾಗುತ್ತಿಲ್ಲ : ವಿರೋಧಿಗಳ ವಿರುದ್ದ ಸಚಿವ ರಮೇಶ ಜಾರಕಿಹೋಳಿ ವಾಗ್ದಾಳಿ

0
30

ಸಂಘ ಪರಿವಾರದಿಂದ ನನಗೆ ಸಿಗುತ್ತಿರುವ ಬೆಂಬಲ ಕೆಲವರಿಗೆ ಸಹಿಸಲಾಗುತ್ತಿಲ್ಲ : ವಿರೋಧಿಗಳ ವಿರುದ್ದ ಸಚಿವ ರಮೇಶ ಜಾರಕಿಹೋಳಿ ವಾಗ್ದಾಳಿ

ಕನ್ನಡಮ್ಮ ಸುದ್ದಿ :ಚಿಕ್ಕೋಡಿ : ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನನ್ನ ಬಗ್ಗೆ ಪಕ್ಷ ಬಿಡುತ್ತೆನೆ ಎಂದು ಊಹಾಪೋಹಗಳನ್ನ ಎಬ್ಬಿಸಲಾಗಿದೆ ಎಂದು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಸಂಘ ಪರಿವಾರದಲ್ಲಿರುವ ತಮ್ಮ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ.ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲೆ ಅಂತ್ಯವಾಗುತ್ತೆ ಎಂದರು.

ಸಿಎಂ ಯಡಿಯೂರಪ್ಪ ಬದಲಾವಣೆ ಆಗುತ್ತಾರೆ ಎಂಬುವದು ಸತ್ಯಕ್ಕೆ ದೂರವಾದ ಮಾತು‌. ದೇಶದಲ್ಲಿಯೇ ದಕ್ಷತೆಯಿಂದ ಯುವಕರಂತೆ ಯಡಿಯೂರಪ್ಪನವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನ ಬದಲಾವಣೆ ಮಾಡುವದು ಪ್ರಮೇಯವಿಲ್ಲ ಎಂದರು.

ಅವರನ್ನ ಬದಲಾವಣೆ ಮಾಡಿದರೇ ವಿರೋಧ ಮಾಡುತ್ತೀರಾ ಎಂದ ಪ್ರಶ್ನೆಗೆ ಇದು ದೊಡ್ಡವರ ವಿಷಯ ಎಂದು‌ ರಮೇಶ ಜಾರಕಿಹೊಳಿ ನುನಚಿಕೊಂಡರು.

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಎರಡು ಬಣಗಳು ಇರುವದನ್ನ ಪರೋಕ್ಷವಾಗಿ ಒಪ್ಪಿಕೊಂಡ ರಮೇಶ ಜಾರಕಿಹೊಳಿ, ಮುಂಬರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕತ್ತಿ ಸಹೋದರರು ಹಾಗೂ ಬಾಲಚಂದ್ರ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ.

ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡದ ವಿಚಾರದ ಕುರಿತು ಮಾತನಾಡುತ್ತ, ನಾನು ಶಾಸಕನಾಗಿ ೨೦ ವರ್ಷಗಳ ಬಳಿಕ ಮಂತ್ರಿ ಆಗಿದ್ದೇನೆ ಅದು ಹಣೆ ಬರಹದಲ್ಲಿ ಇರಬೇಕು. ಉಮೇಶ ಕತ್ತಿ ಹಿರಿಯರು ಮಂತ್ರಿಗಿಂತ ಹೆಚ್ಚು ಪವರ ಉಮೇಶ ಕತ್ತಿ ಇದೆ ಎಂದರು.

loading...