ಸಂಭ್ರಮದ ಭಗೀರಥ ಜಯಂತಿ

0
81

ಬೆಳಗಾವಿ 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಭಗೀರಥ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು.
ಸಂಜೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನವದಲ್ಲಿ ಜರುಗಿದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಸಚಿವ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿ ಮಾತನಾಡಿ. ಮಹಾನ ವ್ಯಕ್ತಿಗಳ ತತ್ವಾದರ್ಶಗಳನ್ನು ನಮಮ್ ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಬೇಕು. ಪ್ರಯತ್ನಕ್ಕೆ ಇನ್ನೊಂದು ಹೆಸರೆ ಭಗೀರಥ ಮಹರ್ಷಿಯಾಗಿದ್ದಾರೆ. ತನ್ನ ಛಲ ಬಿಡದ ತಪಸ್ಸಿನಿಂದ ಶಿವನನ್ನು ಮೆಚ್ಚಿಸಿ ಗಂಗೆಯನ್ನು ಭೂಮಿಗೆ ತಂದ ಮಹಾನ ವ್ಯಕ್ತಿ ಭಗೀರಥರಾಗಿದ್ದಾರೆ ಎಂದರು.
ಇದಕ್ಕೂ ಮೊದಲು ಶ್ರೀ ಭಗೀರಥರವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಅಶೋಕ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಅಶೋಕ ವೃತ್ತದಿಂದ ಆರಂಭವಾದ ಭಗೀರಥ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನವನ ತಲುಪಿತು.
ಕುಂಭ ಹೊತ್ತ ಮಹಿಳೆಯರು, ವಾದ್ಯಮೇಳಗಳು, ರೂಪಕಗಳು ಮೆರವಣಿಗೆಯ ಆಕರ್ಷಣೆಗಳಾಗಿದ್ದವು. ಮೆರವಣಿಗೆಯಲ್ಲಿ ಸಮಾಜ ಬಾಂಧವರು, ವಿವಿಧ ಇಲಾಖಾ ಅಧಿಕಾರಿಗಳು, ಗಣ್ಯರು ಭಾಗವಹಿಸಿದ್ದರು.

loading...

LEAVE A REPLY

Please enter your comment!
Please enter your name here