ಸಚಿವರ ಪ್ರವಾಸ ಎಂ.ಬಿ.ಪಾಟೀಲ

0
22

ವಿಜಯಪುರ,: ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೆ.12 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ನಗರಕ್ಕೆ ಆಗಮಿಸುವ ಸಚಿವರು 10 ಗಂಟೆಗೆ ಭೂತನಾಳ ನಂದಿನಿ ಡೈರಿ ಆವರಣದಲ್ಲಿ ಆಯೋಜಿಸಿದ್ದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವಿವಿಧ ಅಭಿವೃದ್ದಿ ಕಾರ್ಯಗಳ ಭೂಮಿ ಪೂಜೆ, ಡೈರಿ ಮುಖ್ಯದ್ವಾರ ಮತ್ತು ಹೈಟೆಕ್ ನಂದಿನಿ ಕ್ಷೀರಮಳಿಗೆಯ ಭೂಮಿ ಪೂಜೆ ಮತ್ತು ನಂದಿನಿ ಕೊಲ್ಹಾರ ಕೆನೆ ಮೊಸರಿನ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕ ಕುಂದುಕೊರತೆ ವಿಚಾರಣೆ, ಅಹವಾಲು ಸ್ವೀಕರಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕ ಕುಂದುಕೊರತೆ ವಿಚಾರಣೆ, ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

loading...

LEAVE A REPLY

Please enter your comment!
Please enter your name here