ಸಚಿವ ಎಂ.ಬಿ.ಪಾಟೀಲರ ಜಿಲ್ಲಾ ಪ್ರವಾಸ

0
25

ವಿಜಯಪುರ : ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ನ.21 ಮತ್ತು 22ರಂದು ವಿಜಯಪುರ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ದಿ.21ರಂದು ಬೆಳಿಗ್ಗೆ 11.30ಕ್ಕೆ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ ಸಂಜೆ 5ಕ್ಕೆ ಆಲಮಟ್ಟಿಯಲ್ಲಿ ಭೂಸ್ವಾಧೀನ, ಪುನರವಸತಿ ಮತ್ತು ಪುನರನಿರ್ಮಾಣ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.
22ರಂದು ಬೆಳಿಗ್ಗೆ 9ಕ್ಕೆ ಗೋಲಗುಮ್ಮಟ ಆವರಣದಲ್ಲಿ ಉತ್ತರ ಕರ್ನಾಟಕದ ಪ್ರವಾಸಿಗಳ ಸೇವೆಗಾಗಿ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ನಿಗಮದ ನೂತನ ಸುವಿಹಾರಿ ಬಸ್‍ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 10.30ಕ್ಕೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಏರ್ಪಡಿಸಿರುವ ಜನ-ಮನ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ತೊರವಿ ಗ್ರಾಮದ ಗೋಲ್ಲಾಳೇಶ್ವರ ಲಿಂಗ ಪ್ರತಿಷ್ಠಾಪನಾ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. 1.30ಕ್ಕೆ ಕನಮಡಿ ಗ್ರಾಮದ ಕೆಂಚರಾಯ ದೇವಸ್ಥಾನದ ಹತ್ತಿರ ನೂತನ ಕಟ್ಟಡ ಭೂಮಿಪೂಜೆ ಹಾಗೂ ಅರಣ್ಯ ಸಿದ್ದೇಶ್ವರ ದೇವಸ್ಥಾನ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3ಗಂಟೆಗೆ. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಸಂಜೆ ಬೆಂಗಳೂರಿಗೆ ತೆರಳÀಲಿದ್ದಾರೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.

loading...

LEAVE A REPLY

Please enter your comment!
Please enter your name here