ಸಮಾಜ ಘಾತುಕ ಸಂಘಟನೆ ನಿಷೇಧಕ್ಕೆ ಆಗ್ರಹ

0
34

ಬೆಳಗಾವಿ
ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಮಾಜಘಾತುಕ ಶಕ್ತಿಗಳ ಕೈವಾಡ ಎದ್ದು ಕಾಣುತ್ತಿದೆ. ಇಂತಹ ಸಮಾಜ ಕಂಟಕ ಶಕ್ತಿಗಳ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವಂತೆ ಆಗ್ರಹಿಸಿ ಶುಕ್ರವಾರ ಹಮಾರಾ ದೇಶ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು.
ಕೆ.ಜಿ.ಮತ್ತು ಡಿ.ಜೆ. ಹಳ್ಳಿಯ ಕೃತ್ಯ ಇಡೀ ನಾಗರಿಕ ಸಮಾಜಕ್ಕೆ ಕಳಂಕ ತರುವಂಥದು. ಇದು ಉದ್ದೇಶಪೂರ್ವಕವಾಗಿ ಮಾಡಿದ ಯೋಜನಾಬದ್ಧ ಹಿಂಸಾಚಾರ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಸರ್ಕಾರ ದಿಟ್ಟ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು. ದುಷ್ಟ ಶಕ್ತಿಗಳನ್ನು ಎಷ್ಟೇ ಪ್ರಭಾವಶಾಲಿಯಾಗಿರಲಿ ಸದೆ ಬಡಿಯಬೇಕು. ನಾಗರಿಕರ ರಕ್ಷಣೆಗೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ಪೊಲೀಸರು, ಪತ್ರಕರ್ತರ ಮೇಲೆ ಹಲ್ಲೆ, ಸಾರ್ವಜನಿಕರ ಆಸ್ತಿ, ಪಾಸ್ತಿ ನಷ್ಟದಿಂದ ನಾಗರಿಕರು ಬೆಚ್ಚಿ ಬಿದ್ದಿದ್ದಾರೆ. ಇಂತಹ ಘಟನೆಗೆ ಕಾರಣರಾದ ದುಷ್ಟ ಶಕ್ತಿಗಳನ್ನು ಸದೆ ಬಡಿಯದಿದ್ದರೆ ಮತ್ತೆ ರಾಜ್ಯದ ಯಾವ ಭಾಗದಲ್ಲಾದರೂ ಇಂತಹ ಹಿಂಸಾಚಾರ ಮರುಕಳಿಸುವ ಸಾಧ್ಯತೆ ಇದೆ. ಸರ್ಕಾರ ಮೊದಲು ದುಷ್ಟರನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಬೆಳಗಾವಿ ಹಮಾರ್ ದೇಶ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

loading...