ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

0
43

ಕನ್ನಡಮ್ಮ ಸುದ್ದಿ-ಖಾನಾಪುರ: ತಾಲೂಕಿನ ಮಂಗೇನಕೊಪ್ಪ ಗ್ರಾಮದ ಮರೆಮ್ಮ ದೇವಾಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶುಕ್ರವಾರ ತಾಪಂ ಸದಸ್ಯ ಶಿವಾನಂದ ಚಲವಾದಿ, ಭೂಮಿಪೂಜೆ ನೆರವೇರಿಸಿದರು.
ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮಸ್ಥರು ಮರೆಮ್ಮ ದೇವಾಲಯದ ಆವರಣದಲ್ಲಿ 5 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಯೋಜನೆ ರೂಪಿಸಿದ್ದು, ಇದಕ್ಕಾಗಿ ತಾಲೂಕು ಪಂಚಾಯ್ತಿ ಸದಸ್ಯರ ನಿಧಿಯಿಂದ 2 ಲಕ್ಷ ಅನುದಾನವನ್ನು ನೀಡಲಾಗಿದೆ. ಉಳಿದ ಹಣವನ್ನು ಗ್ರಾಮಸ್ಥರು ದೇಣಿಗೆಯ ಮೂಲಕ ಸಂಗ್ರಹಿಸಿ ಕಾಮಗಾರಿ ಕೈಗೊಳ್ಳಲು ಮುಂದಾಗಿದ್ದಾರೆ. ಸಮುದಾಯ ಭವನ ನಿರ್ಮಾಣದಿಂದ ಗ್ರಾಮದ ಜನರಿಗೆ ಶುಭಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಟ್ಟರು.

ಮಾಜಿ ಜಿಪಂ ಸದಸ್ಯ ಬಾಬುರಾವ್ ದೇಸಾಯಿ ಮಾತನಾಡಿ, ತಾಲೂಕಿನಲ್ಲೇ ದೊಡ್ಡದಾದ ಮಂಗೇನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ವಾಲಿ ಬಾಲ್ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುವ ಮೂಲಕ ಗ್ರಾಮಕ್ಕೆ ಹೆಸರು, ಕೀರ್ತಿ ತಂದಿದ್ದಾರೆ. ಗ್ರಾಮಸ್ಥರು ತಮ್ಮ ಮಕ್ಕಳಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಮೂಲಕ ಗ್ರಾಮದ ಮತ್ತಷ್ಟು ಪ್ರತಿಭೆಗಳ ಅನಾವರಣಕ್ಕೆ ಕಾರಣೀಭೂತರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸುರೇಶ ದೇಸಾಯಿ, ರವಿ ಬನೋಶಿ, ಪರಶುರಾಮ ಸಾಗರೇಕರ, ಮಹಾಂತೇಶ ಮಡಾಕರ, ಎನ್.ಎನ್ ಪಾಟೀಲ ಸೇರಿದಂತೆ ಗ್ರಾಮಸ್ಥರು, ಗ್ರಾಪಂ ಸದಸ್ಯರು ಮತ್ತು ಮರೆಮ್ಮ ದೇವಾಲಯ ಸಮಿತಿಯ ಪದಾಧಿಕಾರಿಗಳು ಇದ್ದರು.

loading...