ಸಾಲಬಾಧೆ ತಾಳಲಾರದೆ ಕತ್ತು ಕುಯ್ದುಕೊಂಡು ಯುವ ರೈತ ಆತ್ಮಹತ್ಯೆ

0
14

ಬೆಂಗಳೂರು: ಸಾಲಬಾಧೆ ತಾಳಲಾರದೆ ಕತ್ತು ಕುಯ್ದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾರನಹಳ್ಳಿಯಲ್ಲಿ ನಡೆದಿದೆ.
ನಾರನಹಳ್ಳಿಯ ರಘು(೩೮) ಮೃತ ರೈತ. ಸ್ಥಳೀಯರ ಹೇಳಿಕೆಯ ಪ್ರಕಾರ ರಘು ಎರಡರಿಂದ ಮೂರು ಲಕ್ಷ ಕೈಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಸಾಲಕ್ಕೆ ಹೆದರಿ ಮನೆಯಲ್ಲಿಯೇ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದಿದ್ದವನನ್ನು ಆಸ್ಪತ್ರಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...