ಸೇನೆ – ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ

0
5

ಪುಲ್ವಾಮಾ:- ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮಿರದ ಪುಲ್ವಾಮದಲ್ಲಿ ಬೆಳ್ಳಂ ಬೆಳಗ್ಗೆ ಭಯೋತ್ಪಾದಕರನ್ನು ಮಟ್ಟ ಹಾಕಲು ಸೇನೆ ಕಾರ್ಯಾಚರಣೆ ನಡೆಸಿದೆ.
ಪುಲ್ವಾಮಾ ಜಿಲ್ಲೆಯ ಮರ್ವಾಲ್ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಸೇನಾಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ.ಕಾಶ್ಮೀರ ವಲಯದ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದಕ್ಕೂ ಮುನ್ನ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹೂತಿಟ್ಟಿದ್ದ ಸ್ಫೋಟಕವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿವೆ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

loading...