ಸ್ವಾಮೀಜಿ ಭೇಟಿಗೆ ಬಂದ ಯಡಿಯೂರಪ್ಪ

0
21

ಬೆಂಗಳೂರು: ನವದೆಹಲಿಯಲ್ಲಿ ಆರಂಭಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ದೀಢಿರನೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಕಾರ್ಯಕಾರಿಣಿ ಸಭೆ ಇದ್ದರೂ ಬಿ.ಎಸ್.ಯಡಿಯೂರಪ್ಪ ದಿಢೀರ್ ಆಗಿ ಬೆಂಗಳೂರಿಗೆ ವಾಪಸ್ ಆಗುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಬಿಎಸ್‍ವೈ ಕುಟುಂಬದ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿಯೊಬ್ಬರನ್ನು ಭೇಟಿಯಾಗಲು ಬೆಂಗಳೂರಿಗೆ ಬರುತ್ತಿದ್ದು,ಭೇಟಿ ಬಳಿಕ ಮತ್ತೆ ದೆಹಲಿಗೆ ತೆರಳುತ್ತಿದ್ದಾರೆ.
ಇನ್ನು ನವದೆಹಲಿಯಲ್ಲಿ ಆರಂಭಗೊಂಡಿರುವ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ನವ ದೆಹಲಿಗೆ ತೆರಳಿದ್ದರು.ಆದರೆ ಇದ್ದಕ್ಕಿದ್ದಂತೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.
ಅಲ್ಲದೆ, ಯಡಿಯೂರಪ್ಪ ಇದ್ದಕ್ಕಿದ್ದಂತೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವುದು ಊಹಾಪೋಹಗಳಿಗೆ ಇನ್ನಷ್ಟು ಪುಷ್ಟಿ ನೀಡಿದಂತಿದೆ.ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಜಾರಕಿ ಹೊಳಿ ಸಹೋದರರು ಅಸಮಾಧಾನವಾಗಿರುವುದು, ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎಫ್‍ಐಆರ್ ದಾಖಲಿಸಲು ಮುಂದಾಗಿದ್ದಾರೆ ಎಂಬ ಹಿನ್ನೆಲೆಯಲ್ಲಿ ಯಡಿಯೂರಪ್ಪ ಹಿಂತಿರುಗಿರುವುದು ಸುದ್ದಿಗೆ ರೆಕ್ಕೆಪುಕ್ಕ ಬಂದಂತಾಗಿದೆ.
ಇದೇ ವೇಳೆ ಯಡಿಯೂರಪ್ಪ ದಿಢೀರ್ ಬೆಂಗಳೂರಿಗೆ ವಾಪಸಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಮುಖವಾದ ಕೆಲಸದ ಮೇಲೆ ಬೆಂಗಳೂರಿಗೆ ಹೋಗಿದ್ದಾರೆ. ಮತ್ತೆ ಕಾರ್ಯಕಾರಣಿಗೆ ಆಗಮಿಸಲಿದ್ದಾರೆ ಎಂದು ಹೇಳಿದರು.
ಆದರೆ ಪ್ರಮುಖ ಕಾರಣ ಏನು ಎಂಬುದನ್ನು ಹೇಳಲಿಲ್ಲ ಹಾಗೂ ಯಾರ ಭೇಟಿಗೆ ತೆರಳಲಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ನೀಡಲಿಲ್ಲ. ಯಡಿಯೂರಪ್ಪ ಮೂಡಿಸಿದ್ದ ಕುತೂಹಲವನ್ನು ಸಿ.ಟಿ.ರವಿ ಮತ್ತೂ ಹೆಚ್ಚಿಸಿದ್ದಾರೆ.
ಈ ನಡುವೆ ಎರಡು ದಿನಗಳ ಕಾಲ ನಡೆಯುತ್ತಿರುವ ಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ವರ್ಷಾಂತ್ಯದಲ್ಲಿ ಬರುವ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.ಬಳಿಕ ಲೋಕಸಭಾ ಚುನಾವಣೆ ಬಗ್ಗೆ ಸಮಾಲೋಚನೆ ಮಾಡಲಾಗುತ್ತದೆ.ಚುನಾವಣೆಗಳಲ್ಲಿ ಯಾವ ವಿಷಯ ಪ್ರಸ್ತಾಪಿಸಬೇಕೆಂಬ ಬಗ್ಗೆ ಚರ್ಚಿಸಲಾಗುತ್ತದೆ.
ಕೇಂದ್ರ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಬಗ್ಗೆ ಚರ್ಚೆ ಮಾಡಲಾಗುತ್ತದೆ. ನೋಟು ಅಮಾನ್ಯೀಕರಣ ಸಮರ್ಥಿಸಿಕೊಳ್ಳುವ ಬಗ್ಗೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸಮರ್ಥಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಅಲ್ಲದೆ,ಮೋದಿ ಮತ್ತು ಅಮಿತ್ ಷಾ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಕ್ರಮದ ಬಗ್ಗೆ ಸಮಾಲೋಚನೆ ನಡಸಿ, ಕಾರ್ಯಕಾರಿಣಿ ಸದಸ್ಯರಿಗೆ ಸಲಹೆ ನೀಡಲಿದ್ದಾರೆ.
ಒಟ್ಟಾರೆ ಯಡಿಯೂರಪ್ಪÀರ ಈ ನಡೆ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದು,ಅವರು ದಿಢೀರನೆ ಬೆಂಗಳೂರಿಗೆ ವಾಪಸ್ಸಾಗಿದ್ದರ ಹಿಂದಿನ ಉದ್ದೇಶ ಏನು ಎಂಬ ಪ್ರಶ್ನೆಗಳು ಉದ್ಭವಿಸಿವೆ.

loading...