ಹೆಚ್ಚಿನ ಅನುದಾನಕ್ಕೆ ಶಾಸಕಿ ರೂಪಾಲಿ ಆಗ್ರಹ

0
21

ಕಾರವಾರ: ನಂಜುಡಪ್ಪ ವರದಿಯ ಪ್ರಕಾರ ಅಂಕೋಲಾ ತಾಲೂಕು ಅತೀ ಹಿಂದುಳಿದ ತಾಲೂಕಾಗಿದ್ದು ಆದ್ದರಿಂದ ಈ ಕ್ಷೇತ್ರಕ್ಕೆ ಅತೀ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಶಾಸಕಿ ರೂಪಾಲಿ ನಾಯ್ಕ ಕೃಷಿ ಸಚಿವ ಕೃಷ್ಣ ಬೈರೇಗೌಡಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ನಗರಕ್ಕೆ ಆಗಮಿಸಿದ ಕೃಷಿ ಸಚಿವರಿಗೆ ಮನವಿ ನೀಡಿದ ಶಾಸಕಿ ತಾಲೂಕಿನಲ್ಲಿ ಬೇಸಿಗೆ ಸಮಯದಲ್ಲಿ ಉಪ್ಪು ನೀರು ಸಿಹಿ ನೀರಿನೊಂದಿಗೆ ಮಿಶ್ರಣವಾಗಿ ಸುಮಾರು ಹದಿನೈದು ಸಾವಿರ ಜನ ಶುದ್ದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ರಸ್ತೆ ವ್ಯವಸ್ಥೆಗಳಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಿದ್ದು ಅದಕ್ಕೆ ಹೆಚ್ಚಿನ ಅನುದಾನದ ಮಂಜೂರು ಮಾಡುವಂತೆ ಶಾಸಕಿ ರೂಪಾಲಿ ನಾಯ್ಕ ಕೃಷಿ ಸಚಿವರಿಗೆ ಆಗ್ರಹಿಸಿದ್ದಾರೆ. ಶಾಸಕಿಯ ಮನವಿ ಸ್ವೀಕರಿಸದ ಕೃಷಿ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

loading...