ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0
23
loading...

 

ಚಿಕ್ಕಬೆಳ್ಳಿಕಟ್ಟಿ (ತಾ. ಬೈಲಹೊಂಗಲ) 20- ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಬಾಲಕಿಯರು ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುಮಾರಿ ಉಡಚವ್ವ ತಳವಾರ, 400 ಮೀ. ಹಾಗೂ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದರೆ ಕುಮಾರಿ ವಿಜಯಲಕ್ಷ್ಮೀ ಛಬ್ಬಿ 200 ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಗುರುವೃಂದ, ಎಸ್.ಡಿ.ಎಮ್.ಸಿ. ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here