ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರೀಶೀಲನ

0
14
loading...

 ಗದಗ ಸೆಪ್ಟಂಬರ 14 : ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮದನಗೋಪಾಲ ಅವರು ಇಂದು ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನೆ ನಡೆಸಿ, ಚಾಲ್ತಿಯಲ್ಲಿರುವ ಅಭಿವೃದ್ದಿ ಕಾಮಗಾರಿಗಳನ್ನು ಸಕಾಲಕ್ಕೆ ಪೂರ್ಣಗೊಳಿಸಿ , ಸರ್ಕಾರದ ಸೌಲಭ್ಯಗಳು ಸಾರ್ವಜನಿಕ ಬಳಕೆಗೆ ಶೀಘ್ರ ಲಭ್ಯವಾಗುವಂತೆ ಮಾಡಬೇಕೆಂದು ಸೂಚಿಸಿದರು.

ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿಯನ್ನು ಪರೀಶೀಲಿಸಿದ ಅವರು, ರೈತರಿಗೆ ಸಕಾಲಕ್ಕೆ ಅಗತ್ಯಕ್ಕೆ ತಕ್ಕಷ್ಟು ಗೊಬ್ಬರ ಪೂರೈಕೆಯಾಗುವಂತೆ ಕ್ರಮ ವಹಿಸಬೇಕೆಂದು ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಜಂಟಿ ಕೃಷಿ ನಿರ್ದೇಶಕ ಶ್ರೀ ಎನ್.ವಿ.ಚಂದ್ರಶೇಖರ ಅವರು ಶಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಅವಧಿಯಲ್ಲಿ 1.97 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಿದ್ದು , ಸರಿಯಾಗಿ ಮಳೆಯಾಗದ್ದರಿಂದ 1.54 ಲಕ್ಷ ಹೆಕ್ಟೇರನಲ್ಲಿ ಮಾತ್ರ ಬಿತ್ತನೆಯಾಗಿದೆ. ಈ ಪೈಕಿ 85,856 ಹೆಕ್ಟೇರು ಪ್ರದೇಶದಲ್ಲಿ ಶೇ 25 ಕ್ಕಿಂತ ಹೆಚ್ಚಿನ ಪ್ರಮಾಣದ ಬೆಳೆ ಹಾನಿಯಾಗಿದೆ. ಪ್ರಸ್ತುತ 1500 ಟನ್ ಯೂರಿಯಾ ರಸಗೊಬ್ಬರಕ್ಕೆ ತುರ್ತು ಬೇಡಿಕೆ ಇದ್ದು, ಈಗಾಗಲೇ 500 ಟನ್ ಪೂರೈಕೆ ಆಗಿದ್ದು, ಮಿಕ್ಕ ಪ್ರಮಾಣವೂ ಸಕಾಲಕ್ಕೆ ಲಭ್ಯವಾಗಲಿದೆಯೆಂದು ಮಾಹಿತಿ ನೀಡಿದರು.

ಪ್ರವಾಹ ಕಾರಣದಿಂದ ಸ್ಥಳಾಂತರಗೊಳ್ಳುವ ಗ್ರಾಮಗಳ ಜನರಿಗಾಗಿ ನಿರ್ಮಿಸಲಾಗಿರುವ ಆಸರೆ ಮನೆಗಳ ಪ್ರಗತಿಯನ್ನು ಪರೀಶೀಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಪಿ.ಟಿ. ರುದ್ರೇ್ರಗೌಡ ಅವರು ಶಿ ಜಿಲ್ಲೆಯಲ್ಲಿ ಆಸರೆ ಯೋಜನೆ ಅಡಿ 14 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಈ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಒಟ್ಟು 6795 ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಹತ್ತು ಆಸರೆ ಗ್ರಾಮಗಳ ಕಾಮಗಾರಿ ಈಗಾಗಲೇ ಮುಗಿದು, 3441 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ನಾಲ್ಕು ಗ್ರಾಮಗಳಲ್ಲಿ 1244 ಮನೆಗಳ ನಿರ್ಮಾಣ ಬಾಕಿ ಇದ್ದು, ಇವು ಕೂಡ ಪ್ರಗತಿಯ ವಿವಿಧ ಹಂತದಲ್ಲಿವೆಯಂದು ಮಾಹಿತಿ ನೀಡಿದರು.

ಇತ್ತೀಚೆಗೆ ಸುರಿದ ಮಳೆಗೆ ಕೆಲ ಆಸರೆ ಮನೆಗಳು ಸೋರುತ್ತಿರುವುದರ ಬಗ್ಗೆ ವರದಿ ಬಂದಿದ್ದು, ಕೆಮಿಕಲ್ ಪ್ರೂಫ್ ಕೋಟಿಂಗ್ ಮೂಲಕ ಸೋರಿಕೆ ದುರಸ್ತಿ ಮಾಡಲು ಕ್ರಮ ಕೈಕೊಳ್ಳಲಾಗಿದೆಯೆಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಅವರು 14 ಆಸರೆ ಗ್ರಾಮಗಳಲ್ಲಿ ಒಟ್ಟು 965 ಸಿ.ಡಿ. ಗಳನ್ನು ನಿರ್ಮಿಸಿ, ಗ್ರಾಮದಿಂದ ನೀರು ಸರಾಗವಾಗಿ ಹೊರ ಹೋಗುವ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿದ್ದು, 3.21 ಕೋಟಿ ರೂ. ಅನುದಾನ ಸರ್ಕಾರದಿಂದ ಬರಬೇಕಿದೆಯಲ್ಲದೇ ಮೂಲಭೂಸ ಸೌಕರ್ಯಗಳಿಗಾಗಿ 8.44 ಕೋಟಿ ರೂ. ಗಳ ಅಗತ್ಯವಿದ್ದು, ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಕೋರಿದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ 108 ವಾಹನ ಸೇವೆ ಆರಂಭವಾದ ನಂತರದ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ ಸಭೆಗೆ ಮಾಹಿತಿ ನೀಡಿದರು. ನಂತರ ಪಡಿತರ ಚೀಟಿ, ಸಾಮಾಜಿಕ ಭದ್ರತಾ ಯೋಜನೆಗಳು, ಲೋಕೋಪಯೋಗಿ ಇಲಾಖಾ ಕಾಮಗಾರಿಗಳು, ಕುಡಿಯುವ ನೀರಿನ ಯೋಜನೆಗಳು, ಶಿಂಗಟಾಲೂರ ಏತ ನೀರಾವರಿ ಯೋಜನೆ, ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಾದಿಯಾಗಿ ಹಲವಾರು ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ನಡೆಸಿದರು.

ನಂತರ ಅಪರ ಜಿಲ್ಲಾಧಿಕಾರಿ ಪಿ.ಟಿ. ರುದ್ರೇಗೌಡ ಅವರು ಜಿಲ್ಲೆಯ ವಿವಿಧ ಬೇಡಿಕೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಗಮನ ಸೆಳೆದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರಣ್ಣ ತುರಮರಿ ಅವರು ಶಿ ಜಿಲ್ಲೆಯ 72 ಲಂಬಾಣಿ ತಾಂಡಾಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆಯನ್ನು ನಿರ್ಬಂಧಿಸಿದ್ದು, ಈ ತಾಂಡಾಗಳ 1385 ಕುಟುಂಬಗಳಿಗೆ ನರೇಗಾ ಯೋಜನೆ ಅಡಿ ಕೆಲಸ ನೀಡಲಾಗಿದ್ದು, 245 ಕುಟುಂಬಗಳಿಗೆ ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿವಿಧ ವೃತ್ತಿ ತರಬೇತಿ ನೀಡಲಾಗಿದೆ. ಇದರಲ್ಲಿ ಕಂಪ್ಯೂಟರ್ ಕಲಿಕೆ, ಫ್ಯಾಶನ್ ಡಿಸೈನಿಂಗ್, ಲಂಬಾಣಿ ಕಸೂತಿ, ಹೊಲಿಗೆ ಮತ್ತು ವಾಹನ ಚಾಲನೆ ಸೇರಿದೆಷಿ ಎಂದು ವಿವರಿಸಿದರು.

ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತಿಯ ಈ ಕ್ರಮವನ್ನು ಶ್ಲಾಘಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ತರಬೇತಿ ಪಡೆದವರು ಉತ್ಪಾದಕತೆಯಲ್ಲಿ ತೊಡಗಿಕೊಂಡಲ್ಲಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ದೊರೆಯುವಂತೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕೆಂದು ಸಲಹೆ ಮಾಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಗರ ಹೊರವಲಯದ ಮಲ್ಲಸಮುದ್ರ ಬಳಿ 19.8 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಆಸ್ಪತ್ರೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರೀಶೀಲಿಸಿದರಲ್ಲದೇ ಕಿರಿಯ ಮಹಿಳಾ ಸಹಾಯಕಿಯರ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ, ಅಪರ ಜಿಲ್ಲಾಧಿಕಾರಿ ಪಿ.ಟಿ. ರುದ್ರೇಗೌಡ, ಜಿಲ್ಲಾ ಸರ್ಜನ್ ಡಾ. ಆರ್.ಎನ್.ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here