ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ

0
22
loading...

ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಅಡಿಗಲ್ಲು ಸಮಾರಂಭ

 

ಹಾವೇರಿಃ ಸೆಪ್ಟೆಂಬರ.23: ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಹಾವೇರಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಸತಿ ನಿಲಯದ ಅಡಿಗಲ್ಲು ಸಮಾರಂಭ ಸೆ. 26ರಂದು ಬೆಳಿಗ್ಗೆ 10 ಘಂಟೆಗೆ ನೆರವೇರಲಿದೆ.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ. ಉದಾಸಿ ಅವರು ಅಡಿಗಲ್ಲು ಸಮಾರಂಭ ನೆವೇರಿಸಲಿದ್ದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಚ್.ಬಿ. ವಾಲಿಕಾರ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಬ್ಯಾಡಗಿ ಶಾಸಕ ಸುರೇಶಗೌಡ್ರ ಪಾಟೀಲ, ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಹಾಗೂ ಶಾಸಕ ನೆಹರೂ ಓಲೇಕಾರ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ. ಮತ್ತು ವಿಶೇಷ ಗೌರವಾನ್ವಿತ ಅತಿಥಿಗಳಾಗಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯ ಪ್ರಹ್ಲಾದ ಜೋಷಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮೋಹನ ಲಿಂಬಿಕಾಯಿ, ಶ್ರೀನಿವಾಸ ಮಾನೆ, ಶಾಸಕರಾದ ಜಿ. ಶಿವಣ್ಣ ಹಾಗೂ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ ಮುಂತಾದವರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವರು.

 

 

loading...

LEAVE A REPLY

Please enter your comment!
Please enter your name here