ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮ

0
22
loading...

 

ಹುಬ್ಬಳ್ಳಿ ,30-ಇಂದಿರಾ ಗಾಜಿನ ಮನೆಯಲ್ಲಿ ಮೂರು ದಿನಗಳ ಕಾಲ ಏರ್ಪಾಡಾಗಿರುವ ಫಲ-ಪುಷ್ಪ ಪ್ರದರ್ಶನ -2011 ನ್ನು ಅಕ್ಟೌಬರ್ 1 ರಂದು ಶನಿವಾರ ಸಂಜೆ 4 ಗಂಟೆಗೆ ರಾಜ್ಯದ ಗ್ರಾಮೀಣ ಅಬಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಅವರು ಉದ್ಛಾಟಿಸಲಿದ್ದಾರೆ. ಸಮಾರಂಭದಲ್ಲಿ ಜಿಲ್ಲೆಯ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು, ಮಿಗಮ ಮಂಡಳಿ ಅಧ್ಯಕ್ಷರು, ಪಾಲಿಕೆ ಮಹಾಪೌರರು, ಉಪ ಮಹಾಪೌರರು, ಜಿ. ಪಂ ಅಧ್ಯಕ್ಷ, ಉಪಾಧ್ಯಕ್ಷರು, ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕಾ  ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಕಪತಿಗಳು ವಿಶೇಷ ಆಹ್ವಾನತರಾಗಿ ಆಗಮಿಸಲಿದ್ದಾರೆ.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಮಹಾನಗರಪಾಲಿಕೆ, ಕೃಷಿ ಇಲಾಖೆ, ಹಾಪ್ಕಾಮ್ಸ್ ಧಾರವಾಡ ಹಾಗೂ ಬೆಂಗೇರಿ ಖಾದಿ ಗ್ರಾಮೋದ್ಯೌಗ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಈ ಪ್ರದರ್ಶನದ ಅಂಗವಾಗಿ ವಿವಿಧ ಸ್ಫರ್ಧೆಗಳನ್ನು ಎರ್ಪಡಿಸಲಾಗಿದೆ.  ಅಕ್ಟೌಬರ್ 2 ರಂದು ರವಿವಾರ ಸಂಜೆ 6 ಗಂಟೆಗೆ ಇಂದಿರಾ ಗಾಜಿನ ಮನೆಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದ್ದು, ಸಚಿವ ಜಗದೀಶ ಶೆಟ್ಟರ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಶಾಸಕ ವೀರಭದ್ರಪ್ಪ ಹಾಲಹರವಿ ಬಹುಮಾನ ವಿತರಿಸಲಿದ್ದಾರೆ.

loading...

LEAVE A REPLY

Please enter your comment!
Please enter your name here