ಬಿಜೆಪಿಗೆ ಒಲಿದ ಮರಕುಂಬಿ ಗ್ರಾ.ಪಂ. ಅಧ್ಯಕ್ಷ ಸಾನ

0
19
loading...

ಬೈಲಹೊಂಗಲ 24- ಸಮೀಪದ ಮುರಕುಂಬಿ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸೋಮಪ್ಪ ರಾಯಪ್ಪ ಬೈಲವಾಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಕಾಂಗ್ರೆಸ್ ಮಡಿನಲ್ಲಿದ್ದ ಈ ಗ್ರಾ.ಪಂ.ನ ಮೂವರು ಕಾಂಗ್ರೆಸ್ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಬೆಂಬಲಿಸುವ ಸುದ್ದಿ ತಿಳಿದ ಕಾಂಗ್ರೆಸ್ ಸದಸ್ಯರೊಬ್ಬರು ಚಿನಾವಣೆಗೆ ನಾಮಪತ್ರ ಸಲ್ಲಿಸದ ಪರಿಣಾಮ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾದರು.

ಎಂಟು ದಿನಗಳಿಂದ ನಡೆದ ರಾಜಕೀಯ ನಾಟಕಕ್ಕೆ ಅಂತಿಮ ತೆರೆ ಬಿದ್ದಿದೆ.ಬಿಜೆಪಿ ಪರ ಗುರುವಾರ ಒಂದು ದಿನ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್ನ ಮೂವರು ಸದಸ್ಯರು ಬಿಜೆಪಿ ಅಭ್ಯರ್ಥಿಯೊಂದಿಗೆ ಗ್ರಾ.ಪಂ.ಗೆ ಆಗಮಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ತನ್ನ ನಾಲ್ವರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸದೇ ನಿರ್ಗಮಿಸಿದರೆಂದು ತಿಳಿದು ಬಂದಿದೆ. ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಿದ ಕೆಲ ಕಾಂಗ್ರೆಸ್ ಸದಸ್ಯರು ಶಾಸಕರ ನೇತೃತ್ವದಲ್ಲಿ ಗ್ರಾಮಗಳು ಅಭಿವರದ್ದಿಗೊಳ್ಳುತ್ತಿದ್ದು ತಮಗೆ ಹೆಮ್ಮೆ ತಂದಿದೆ. ತಾವು ಮಾರ್ಗದರ್ಶನದಲ್ಲಿ ಅಭಿವೃದ್ದಿ ಪರ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

loading...

LEAVE A REPLY

Please enter your comment!
Please enter your name here