ಬಡ ಫಲಾನುಭವಿಗಳಿಗೆ ರಾಷ್ಟ್ತ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯ ಲಾಭ ದೊರಕಿಸಲು ಸಲಹೆ

0
11
loading...

ಬೆಳಗಾವಿ:ಅಕ್ಟೌಬರ್:12: ಬಡ ಫಲಾನುಭವಿಗಳಿಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸುವ ರಾ್ತ್ರಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ನೋಂದಣಿ ಮಾಡುವ ಕಾರ್ಯ ತಕ್ಷಣ ಆರಂಭಿಸಿ, ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರಯತ್ನಿಸಬೇಕೆಂದು ರಾಜ್ಯ ಕಾರ್ಮಿಕ ಇಲಾಖೆಯ ಆಯುಕ್ತರಾದ ಶ್ರೀ. ಎಸ್.ಆರ್. ಉಮಾಶಂಕರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರಾ್ತ್ರಯ ಸ್ವಾಸ್ಥ್ಯ ಬಿಮಾ ಯೋಜನೆಯ ಜಿಲ್ಲಾ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಭಾಗಿತ್ವದೊಂದಿಗೆ ಸರ್ವ ಕುಟುಂಬ ಸಮೀಕ್ಷೆ ಆಧಾರದಲ್ಲಿ ಎಲ್ಲ ಬಿ.ಪಿ.ಎಲ್. ಕುಟುಂಬಗಳಿಗೆ ಉಚಿತ ಆರೋಗ್ಯ ವಿಮೆಯನ್ನು ದೊರಕಿಸಿಕೊಡುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಈ ಯೋಜನೆಯಡಿ ಕೇಂದ್ರ ಸರಕಾರದಿಂದ ಶೇ. 75 ರಷ್ಟು ಹಾಗೂ ರಾಜ್ಯ ಸರಕಾರದಿಂದ ಶೇ. 25 ರಷ್ಟು ವಿಮಾ ಕಂತಿನ ಅನುದಾನವನ್ನು ಭರಿಸಲಾಗುತ್ತದೆ. ಅರ್ಹ ಫಲಾನುಭವಿ ಕುಟುಂಬಗಳು ರ್ವಾಕವಾಗಿ 5 ಜನ ಕುಟುಂಬದ ಸದಸ್ಯರು 30 ಸಾವಿರ ರೂ.ಗಳಲ್ಲಿ ಉಚಿತ ಆರೋಗ್ಯ ಚಿಕಿತ್ಸೆಯ ಸೌಲಭ್ಯ ಪಡೆಯಬಹುದಾಗಿದೆ.

ಜಿಲ್ಲೆಯ ಗ್ರಾಮಾಂತರ ಪ್ರದೇಶದ ಬಿ.ಪಿ.ಎಲ್, ನಗರ ಪ್ರದೇಶದ ಬಿ.ಪಿ.ಎಲ್, ಮಹಾತ್ಮಾಗಾಂಧಿ ರಾ್ತ್ರಯ ಗ್ರಾಮೀಣ ಉದ್ಯೌಗ ಖಾತರಿ ಯೋಜನೆಯಡಿಯ ಕಾರ್ಮಿಕರು, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಂಡಳಿ ಬೆಂಗಳೂರು ಇದರಡಿ ನೋಂದಣಿಗೊಂಡ ಫಲಾನುಭವಿಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ. ಅಧಿಕಾರಿಗಳು ಅರ್ಹ ಫಲಾನುಭವಿಗಳಲ್ಲಿ ಈ ಯೋಜನೆಯ ಬಗ್ಗೆ ಅರಿವು ಮೂಡಿಸಬೇಕು. ವಿಶೇಷವಾದ ಸ್ಮಾರ್ಟ್ ಕಾರ್ಡ ಒದಿಗಸಲಾಗುತ್ತಿರುವ ಹಿನ್ನಲೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಆಗುವಂತೆ ನೋಡಿಕೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಯೋಜನೆಗೆ ಸಂಬಂಧಪಟ್ಟಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಫಿಲ್ಡ್ ಕೀ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಾಗಾರವನ್ನು ಏರ್ಪಡಿಸಬೇಕು. ಎಲ್ಲ ಸರಕಾರಿ ಆಸ್ಪತ್ರೆಗಳು ಈ ಯೋಜನೆಯ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ 41 ಆಸ್ಪತ್ರೆಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು, ಇನ್ನೂ ಹೆಚ್ಚಿನ ಆಸ್ಪತ್ರೆಗಳನ್ನು ಎಂಪ್ಯಾನಲ್ ಮಾಡಿ ಹೆಚ್ಚಿನ ಬಡ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಆಗುವಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಬಡತನಕ್ಕೆ ಆರೋಗ್ಯ ಸಮಸ್ಯೆಗಳು ಕಾರಣವಾಗುತ್ತವೆ. ಆರೋಗ್ಯಕ್ಕೆ ಹೆಚ್ಚಿನ ಖರ್ಚು ಆಗುತ್ತದೆ ಎಂಬ ಆಲೋಚನೆಯೊಂದಿಗೆ ಬಡ ಜನರು ಜೀವನವನ್ನು ನಡೆಸುವಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆರೋಗ್ಯಕ್ಕೆ ಆಗುವ ವೆಚ್ಚದ ಸಾಲ ತೀರಿಸಲು ಇಡೀ ಜೀವನ ಕಳೆಯುವಂತಹ ಪರಿಸ್ಥಿತಿ ಬಡ ಜನರಲ್ಲಿ ಇರುವ ಹಿನ್ನಲೆಯಲ್ಲಿ ಮಹತ್ವಾಕಾಂಕ್ಷೆಯ ಈ ಯೋಜನೆಯ ಲಾಭ ಹೆಚ್ಚು ಹೆಚ್ಚು ಜನರಿಗೆ ಆಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ 2.8 ಲಕ್ಷ ಕುಟುಂಬಗಳು ಈ ಯೋಜನೆ ವ್ಯಾಪ್ತಿಗೆ ಬರುವ ಸಂಭವವಿದೆ. ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಸಮನ್ವಯತೆುಂದ ಕಾರ್ಯನಿರ್ವಹಿಸಿ ಇದರ ಲಾಭ ಬಡಜನರಿಗೆ ಆಗುವಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ|| ಏಕರೂಪ್ ಕೌರ್ ಅವರು ಕಾರ್ಮಿಕ ಇಲಾಖೆ ಅಧಿಕಾರಿಗಳು ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆುದೆ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಾಯ, ಸಹಕಾರ ಒದಗಿಸಲಾಗುತ್ತದೆ ಎಂದ ಅವರು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಬಡ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯುವಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆ ನೀಡಿದರು. ಕೊನೆಯಲ್ಲಿ ಕಾರ್ಮಿಕ ಅಧಿಕಾರಿ ಶ್ರೀ. ಸಂತೋಷ ಹಿಪ್ಪರಗಿ ವಂದಿಸಿದರು.

 

 

loading...

LEAVE A REPLY

Please enter your comment!
Please enter your name here