ರಾಜ್ಯದಲ್ಲಿ 12 ಸಾವಿರ ಎಕರೆ ಬೆಳೆ ಹಾನಿ

0
15
loading...

 

 

ಬೆಳಗಾವಿ ,1- ಅತಿವೃಷ್ಠಿಯಿಂದ ಈ ವರ್ಷ ರಾಜ್ಯದಲ್ಲಿ 12 ಸಾವಿರ ಎಕರೆ ಬೆಳೆ ಹಾನಿಯಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದಿದೆ. ವಾರದಲ್ಲಿ ಕೃಷಿ ಇಲಾಖೆಯಿಂದ ಬೆಳೆ ಹಾನಿಯ ವರದಿ ತರಿಸಿ ಪರಿಹಾರ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಉಮೇಶ ಕತ್ತಿ ತಿಳಿಸಿದರು.

ಶನಿವಾರ ನಗರದಲ್ಲಿ ಪತ್ರಕರ್ತರ ಜತೆ ಅವರು ಮಾತನಾಡಿದರು. ರಾಜ್ಯದ ಕೆಲ ಕಡೆ ಅಗತ್ಯ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿದೆ. ಇದರಿಂದ ರೈತರು ತೊಂದರೆಗೀಡಾಗಿದ್ದಾರೆ ಎಂದು ದೂರುಗಳು ಬಂದಿವೆ. ಆದರೆ ಕೆಲ ಪ್ರದೇಶಗಳಲ್ಲಿ ಸರಾಸರಿಗಿಂತ ಅತ್ಯುತ್ತಮ ಮಳೆಯಾಗಿದೆ.

ಒಟ್ಟಾರೆ ಪರಿಸ್ಥಿತಿ ಅವಲೋಕನ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಅತಿವೃಷ್ಠಿ ಅನಾವೃಷ್ಠಿಯಿಂದ ಹಾನಿಯಾಗಿರುವ ವರದಿ ತಯಾರಿಸಿ ಪರಿಹಾರ ವಿತರಿಸುವ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ, ಚಿಕ್ಕೌಡಿ ವಿಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕೆಲ ಸೇತುವೆಗಳು ಸಂಪೂರ್ಣ ದುರಸ್ತಿ ಮಾಡುವ ಅಗತ್ಯವಿದೆ. ಇವುಗಳ ಸುಧಾರಣೆಗೆ ಜಿಪಂ, ಲೋಕೋಪಯೋಗಿ ಇಲಾಖೆಗಳಿಗೆ 50 ಕೋಟಿ ರೂ.ಯೋಜನೆ ರೂಪಿಸಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ3. ಲೋಕೋಪಯೋಗಿ ಇಲಾಖೆಯಲ್ಲಿ 13 ಕೋಟಿ ರೂ.ರಸ್ತೆ ನಿರ್ವಹಣೆಗೆ ಅನುದಾನ ಲಭ್ಯವಿದೆ. ಈ ಅನುದಾನವನ್ನು ತುರ್ತಾಗಿ ಬಳಸಿಕೊಂಡು ಜಿಲ್ಲೆಯ ಹದಗೆಟ್ಟ ರಸ್ತೆ ಸುಧಾರಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಗಡಿ ಭಾಗದಲ್ಲಿರುವ ಬೆಳಗಾವಿ-ಗೋವಾ ರಾಜ್ಯವನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಪ್ರವಾಸಿಗರಿಗೆ ಇದರಿಂದ ತುಂಬಾ ತೊಂದರೆಯಾಗುತ್ತಿದೆ. ಇದಕ್ಕಾಗಿ ಬೆಳಗಾವಿಯಿಂದ ಗೋವಾ ರಾಜ್ಯದ ಗಡಿವರೆಗಿನ ರಸ್ತೆಯನ್ನು ಶೀಘ್ರ ದುರಸ್ತಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರ ಬೆಳಗಾವಿ ನಗರದ ಸರ್ವಾಂಗೀಣ ಅಭಿವೃದ್ದಿಗೆ ನೀಡಿರುವ 100 ಕೋಟಿ ರೂ. ವಿಶೇಷ ಅನುದಾನದ ಕಾಮಗಾರಿಗಳು ಶೇ.90ರಷ್ಟು ಮುಗಿದಿವೆ. ಬಾಕಿ ಉಳಿದ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

 

loading...

LEAVE A REPLY

Please enter your comment!
Please enter your name here