ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷೆ

0
16
loading...

ಬೆಂಗಳೂರು, ಏ.1: ವಿದ್ಯಾರ್ಥಿ ಜೀವನದ ಭವಿಷ್ಯ ನಿರ್ಧರಿಸುವ ಎಸ್.ಎಸ್.ಎಲ್.ಸಿ. ಪರೀಕ್ಷೆ ನಾಳೆಯಿಂದ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭವಾಗಲಿದೆ. ನಾಳೆ ಬೆಳಿಗ್ಗೆ 10.30ರಿಂದ 1.45ರವರೆಗೆ ಪ್ರಥಮ ಭಾಷಾ ಪತ್ರಿಕೆ ಪರೀಕ್ಷೆ ನಡೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಾಲೂಕು ಹೋಬಳಿ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಯಾವುದೇ ರೀತಿಯ ಮುಜುಗರ ಉಂಟಾಗದಂತೆ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಿಗಾವಹಿಸಿದೆ. ಪಿಯುಸಿ ಪರೀಕ್ಷೆಯ ಕಹಿ ಅನುಭವದ ನಂತರ ಈ ಪರೀಕ್ಷೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಏಪ್ರಿಲ 16ರ ವರೆಗೆ ಈ ಪರೀಕ್ಷೆ ನಡೆಯಲಿದೆ. ಈ ಬಾರಿ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ ಈಗಾಗಲೇ ಪರೀಕ್ಷೆ ನಡೆಯುವ ಎಲ್ಲ ಕೇಂದ್ರಗಳಲ್ಲಿ ಪರೀಕ್ಷೆಗಾಗಿ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಪ್ರದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಆ ಕೇಂದ್ರಗಳ ಸಮೀಪ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ

loading...

LEAVE A REPLY

Please enter your comment!
Please enter your name here