ಜಿಲ್ಲಾ ಆಡಳಿತದಿಂದ 23 ರಂದು ಶಿವಾಜಿ ಜಯಂತಿ ಆಚರಣೆ

0
18
loading...

ಬೆಳಗಾವಿ,17- ಬೆಳಗಾವಿ ಜಿಲ್ಲಾ ಆಡಳಿತದ ವತಿಯಿಂದ ಇದೇ ಏಪ್ರಿಲ್ 23 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಇಂದಿಲ್ಲಿ ನಿರ್ಧರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕೃಷಿ ಸಚಿವ ಉಮೇಶ ಕತ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಶಿವಾಜಿ ಮಹಾರಾಜರ ಜಯಂತಿ ಉತ್ಸವವನ್ನು ಪ್ರಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಇದಕ್ಕಾಗಿ ಸರ್ಕಾರ ಬೆಳಗಾವಿ ಜಿಲ್ಲೆಗೆ 8 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ ಎಂದು ಉಮೇಶ ಕತ್ತಿ ಹೇಳಿದರು.

ಏಪ್ರಿಲ್ 23 ರಂದು ಮುಂಜಾನೆ 9-30 ಕ್ಕೆ ಶಿವಾಜಿ ಉದ್ಯಾನವನದಲ್ಲಿರುವ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿ ಜ್ಯೌತಿಯನ್ನು ಬರಮಾಡಿಕೊಳ್ಳಲಾಗುವುದು. ನಂತರ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ನಂತರ ಸಾಂಸ್ಕ್ಕತಿಕ ಕಾರ್ಯಕ್ರಮಗಳು ನಡೆಯುವವು. ಅಂದು ಸಂಜೆ 4 ಗಂಟೆಗೆ ಜಿಲ್ಲಾ ಆಡಳಿತದ ವತಿಯಿಂದ ಕುಸ್ತಿ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ಕುಸ್ತಿ ಪಟುಗಳಿಗೆ ಶಿವಾಜಿ ಮಹಾರಾಜರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸರ್ಕಾರದ ವತಿಯಿಂದ ಏರ್ಪಡಿಸಲಾಗುವ ಈ ಎಲ್ಲ ಕಾರ್ಯಕ್ರಮಗಳಿಗೆ ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಚಿವ ಉಮೇಶ ಕತ್ತಿ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಶಾಸಕರಾದ ಅಭಯ ಪಾಟೀಲ ಹಾಗೂ ಸಂಜಯ ಪಾಟೀಲ ಅವರು ಸಭೆಯಲ್ಲಿ ಭಾಗವಹಿಸಿ ಶಿವಾಜಿ ಮಹಾರಾಜರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ವಿ. ಅನ್ಬುಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅಜಯ ನಾಗಭೂಷಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ ಸೇರಿದಂತೆ ನಗರದ ಗಣ್ಯರು ಹಾಗೂ ಶಿವಾಜಿ ಮಹಾರಾಜ ಜಯಂತಿ ಉತ್ಸವ ಸಮಿತಿ ಪದಾಧಿಕಾರಿಗಳು ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿದರು.  ಪ್ರಾರಂಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಎಸ್. ಚೌಗಲಾ ಸ್ವಾಗತಿಸಿ, ವಂದಿಸಿದರು…

loading...

LEAVE A REPLY

Please enter your comment!
Please enter your name here