ಮಹಾರಾಷ್ಟ್ತ್ರದಿಂದ ಶೀಘ್ರವೇ 2 ಟಿ.ಎಂ.ಸಿ. ನೀರು : ಸಚಿವ ಕತ್ತಿ

0
8
loading...

ಬೆಳಗಾವಿ,17- ಮಹಾರಾಷ್ಟ್ತ್ರ ರಾಜ್ಯದಿಂದ ಮುಂಬರುವ 2-3 ದಿನಗಳಲ್ಲಿ 2 ಟಿ.ಎಂ.ಸಿ. ಕುಡಿಯುವ ನೀರು ಬಿಡುಗಡೆಗೊಳಿಸುವ ಸಾಧ್ಯತೆಯಿದೆ ಎಂದು ರಾಜ್ಯದ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ ಅವರು ತಮ್ಮ ಹಾಗೂ ಜಲಸಂಪನ್ಮೂಲ ಸಚಿವರ ನಿಯೋಗವು ಈಗಾಗಲೇ ಮಹಾರಾಷ್ಟ್ತ್ರ ರಾಜ್ಯದ ಮುಖ್ಯಮಂತ್ರಿಗಳಿಗೆ ಭೇಟಿ ನೀಡಿ 5 ಟಿ.ಎಂ.ಸಿ. ನೀರು ಬಿಡುಗಡೆ ಮಾಡುವಂತೆ ಕೋರಲಾಗಿತ್ತು. ಆದರೆ ಮಹಾರಾಷ್ಟ್ತ್ರವು ಸಹ ಬರಪರಿಸ್ಥಿತಿಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ 2 ಟಿ.ಎಂ.ಸಿ. ನೀರನ್ನು ಬಿಡುಗಡೆಗೊಳಿಸುವ ಕುರಿತು ಅಲ್ಲಿಯ ಮುಖ್ಯಮಂತ್ರಿಗಳು ತಿಳಿಸಿದ್ದು, 2-3 ದಿನಗಳಲ್ಲಿ ಕರ್ನಾಟಕಕ್ಕೆ ಈ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯದ 123 ತಾಲೂಕುಗಳು ಭೀಕರ ಬರಗಾಲವನ್ನು ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ 2 ಟಿ.ಎಂ.ಸಿ. ನೀರು ಬಂದಲ್ಲಿ ಇರುವ ನೀರನ್ನು ಸಮಾಧಾನಕರ ರೀತಿಯಲ್ಲಿ ಬಳಸಲಾಗುವುದೆಂದ ಅವರು ಭೀಕರ ಬರಪರಿಸ್ಥಿತಿಯಲ್ಲಿ ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಬೆಳಗಾವಿ ಜಿಲ್ಲೆಯ 7 ತಾಲೂಕುಗಳು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಈಗಾಗಲೇ 5-6 ಸಭೆಗಳನ್ನು ಸಹ ನಡೆಸಿ ಬರಪರಿಸ್ಥಿತಿ ನಿರ್ವಹಣೆ ಕುರಿತು ಚರ್ಚಿಸಲಾಗಿದೆ. ಈಗಾಗಲೇ ಕುಡಿಯುವ ನೀರಿನ ಯೋಜನೆಗಳಿಗೆ 6 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಜಿಲ್ಲಾಡಳಿತದ ಹತ್ತಿರ ಇನ್ನೂ 15 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಬರಪರಿಸ್ಥಿತಿ ನಿಭಾಯಿಸಲು ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೈಜೋಡಿಸಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

ಸಚಿವರು ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಛತ್ರಪತಿ ಶಿವಾಜಿ ಜಯಂತಿ ಆಚರಣೆಗೆ 8 ಲಕ್ಷ ರೂ.ಗಳನ್ನು ಘೋಷಿಸಿದ್ದು, ಸರ್ವ ಭಾಷಿಕರು ಪರಸ್ಪರ ಸಹಬಾಳ್ವೆಯೊಂದಿಗೆ ಈ ಸರ್ಕಾರಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುವದೆಂದು ಹೇಳಿದ ಸಚಿವರು ಜಿಲ್ಲೆಯಲ್ಲಿ ವಿದ್ಯುತ್ ಅಭಾವ ನೀಗಿಸಲು ಹಾಗೂ ದುರಸ್ತಿಯಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ತಕ್ಷಣ ಬದಲಿಸಿ ಸಮರ್ಪಕ ವಿದ್ಯುತ್ ಕಲ್ಪಿಸುವಂತೆ ಹಾಗೂ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅಜಯ ನಾಗಭೂಷಣ ಉಪಸ್ಥಿತರಿದ್ದರು…

loading...

LEAVE A REPLY

Please enter your comment!
Please enter your name here