ಜಾನಪದ ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ಡಾ.ಎಚ್.ಎಮ್.ಚನ್ನಪ್ಪಗೋಳ ನೇಮಕ

0
12
loading...

ಅಥಣಿ ಜು.22(ಕ.ವಾ)-ದೇಶದಲ್ಲೇ ಮೊಟ್ಟಮೊದಲ ಜಾನಪದ ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೋಟಗೋಡಿಯಲ್ಲಿ ಸ್ಥಾಪನೆಗೊಂಡಿದೆ. ಇದು ವಿಶ್ವದ ಪ್ರಪ್ರಥಮ ಜಾನಪದ ವಿಶ್ವವಿದ್ಯಾಲಯವೂ ಆಗಿದೆ. ಈ ವಿಶ್ವವಿದ್ಯಾಲಯಕ್ಕೆ ಕೆಎಲ್ಇ ಸಂಸ್ಥೆಯ ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಮಹಾವಿದ್ಯಾಲಯ ಅಥಣಿಯಲ್ಲಿ ಕನ್ನಡ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎಚ್.ಎಮ್.ಚನ್ನಪ್ಪಗೋಳ ಇವರನ್ನು ಕರ್ನಾಟಕ ಸರಕಾರವು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಸಿಂಡಿಕೇಟ್ ಸದಸ್ಯರಾಗಿ ನೇಮಕವಾದ ಡಾ.ಎಚ್.ಎಮ್.ಚನ್ನಪ್ಪಗೋಳ ಇವರಿಗೆ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರು ಮತ್ತು ಸದಸ್ಯರು, ಪ್ರಾಚಾರ್ಯ ಪ್ರೊ.ಬಿ.ಆರ್.ಕಂಟೀಕರ ಹಾಗೂ ಪ್ರಾಧ್ಯಾಪಕ, ಪ್ರಾಧ್ಯಾಪಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

 

loading...

LEAVE A REPLY

Please enter your comment!
Please enter your name here