ಬಸ್-ಟೆಂಪೋ ಡಿಕ್ಕಿ: ಇಬ್ಬರು ಮಹಿಳೆಯರ ಸಾವು

0
17
loading...

ಖಾನಾಪುರ 1- ತಾಲೂಕಿನ ವಣ್ಣೂರ ಸಮೀಪ ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ಟೆಂಪೋವೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ಮಹಿಳೆಯರನ್ನು ಗೋಕಾಕ ತಾಲೂಕಿನ ಅಡಿವೆಪ್ಪನ ಅಂಕಲಗಿಯ ಮಲ್ಲವ್ವ ಚಚಡಿ(58), ಯಲ್ಲವ್ವ ಚಚಡಿ(35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಕೆಲವರಿಗೆ ತಲೆಗೆ, ಬೆನ್ನಿಗೆ ಬಲವಾದ ಏಟುಗಳಾಗಿವೆ. ಕೆಲವರ ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತುರ್ತು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಪಘಾತಕ್ಕೊಳಗಾದ ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ.

 

loading...

LEAVE A REPLY

Please enter your comment!
Please enter your name here