ದಿ.30 ರಂದು ಡಾ.ಬಿ.ಆರ್.ಅಂಬೇಡ್ಕರ 121 ನೇ ಜನ್ಮದಿನಾಚರಣೆ

0
22
loading...

3ನೇ ಮಹಾಸಮ್ಮೇಳನ,ದಶಮಾನೋತ್ಸವ ಸಮಾರಂಭ

ಬಾಗಲಕೋಟ, 27- ಕರ್ನಾಟಕ  ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ  121 ನೇ ಜನ್ಮ ದಿನಾಚರಣೆ , ರಾಜ್ಯ ಮಟ್ಟದ 3 ನೇ ಮಹಾ ಸಮ್ಮೇಳನ ಹಾಗೂ ದಶಮಾನೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂ.ಬಿ.ನಾಯ್ಕರ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ  ದಿ. 30  ರ ಭಾನುವಾರ  ಬೆ. 11 .30 ಕ್ಕೆ ನಗರದ ಶ್ರೀನಿವಾಸ ಕಲ್ಯಾಣಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಸಾರಿಗೆ ಹಾಗೂ ಗೃಹ ಸಚಿವ ಆರ್.ಅಶೋಕ ಉದ್ಘಾಟಿಸಲಿದ್ದು,  ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆಂದರು.

ಸಣ್ಣ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕ್ಕತಿ ಸಚಿವ ಗೋವಿಂದ ಎಂ.ಕಾರಜೋಳ,  ನಗರಾಭಿವೃದ್ದಿ ಹಾಗೂ ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ, ಶಾಸಕ ನೆಹರು ಚ.ಓಲೇಕಾರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ,  ಸಂಸದ ಪಿ.ಸಿ. ಗದ್ದಿಗೌಡರ,  ಮಾಜಿ ಸಚಿವ ಶ್ರೀರಾಮುಲು,  ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಶಾಸಕ ವೀರಭದ್ರಪ್ಪ ಹಾಲಹರವಿ, ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕ.ರಾ.ರ.ಸಾ.ನಿಗಮ ವ್ಯವಸ್ಥಾಪಕ ನಿರ್ದೇಶಕ ಎನ್.ಮಂಜುನಾಥ ಪ್ರಸಾದ್, ಬೆಂ.ಮ.ಸಾ.ಸಂಸ್ಥೆ  ವ್ಯವಸ್ಥಾಪಕ ನಿರ್ದೇಶಕ ಕೆ.ಆರ್.ಶ್ರೀನಿವಾಸ,  ಮನೋಜ್ ಜೈನ್,  ಜಿ.ಎಸ್.ಶಿವಮೂರ್ತಿ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಖ್ಯಾತ ನೇತ್ರ ತಜ್ಞ  ಡಾ. ಹೆಚ್.ಆರ್.ಸುರೇಂದ್ರ,  ಡಾ.ಬಿ.ಪಿ.ಮಹೇಶ ಚಂದ್ರಗುರು, ಆರ್.ಮೋಹನ್ ರಾಜ್ ವಿಶೇಷ ಭಾಷಣ ಮಾಡುವರು ಎಂದು ತಿಳಿಸಿದರು.

ಅಂದು ಬೆಳಿಗ್ಗೆ  10 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ವಿವಿಧ ಕಲಾತಂಡಗಳಿಂದ ವೈಭವದ ಮೆರವಣಿಗೆ ನಡೆಯಲಿದ್ದು, ಬಾಗಲಕೋಟ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ಎಂ.ರಮೇಶ ಚಾಲನೆ ನೀಡಲಿದ್ದಾರೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಠ್ಠಲ ರಾಠೋಡ ಹಾಜರಿದ್ದರು.

 

 

loading...

LEAVE A REPLY

Please enter your comment!
Please enter your name here