ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

0
77
loading...

ಹಾವೇರಿ: ಅ.05: ಜಿಲ್ಲೆಯ ಹಾನಗಲ್ಲ ತಾಲೂಕು ಮಹಾರಾಜಪೇಟೆ ಬಳಿ ಇರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2013-14ನೇ ಸಾಲಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ  2013ರ ಫೆಬ್ರವರಿ 10 ರಂದು ಆಯ್ಕೆ ಪರೀಕ್ಷೆ ನಡೆಯಲಿದೆ.

ಪ್ರಸಕ್ತ ಸಾಲಿನಲ್ಲಿ ಸರಕಾರಿ ಶಾಲೆ, ಮಾನ್ಯತೆ ಪಡೆದ ಖಾಸಗಿ ಶಾಲೆ ಹಾಗೂ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳಿಂದ ದಿನಾಂಕ: 31-10-2012ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಸಾರ್ವ ಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ, ಹಾಗೂ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ಮಹಾರಾಜಪೇಟೆಯ ಜವಾಹರ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಮಹಾವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ. ಅರ್ಜಿಗಳನ್ನು ವಿದ್ಯಾಲಯದ ವೆಬ್ಸೈಟ್ ಣಣಠಿ://ರಿಟಿತಚಿತಜಡಿ.ರಠ.ಟಿನಲ್ಲಿ ಡೌನಲೋಡ್ ಮಾಡಿಕೊಂಡು ಸಲ್ಲಿಸಬಹುದೆಂದು ಅವರು ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here