ಬಟಗಿ ಕುಟುಂಬಕ್ಕೆ ನ್ಯಾಯ ಕಲ್ಪಿಸಲು ಚಂಪಾ ಆಗ್ರಹ

0
23
loading...

ಬೆಳಗಾವಿ 30- ಕಳೆದುಕೊಂಡ ಜಮೀನಿಗೆ ಪರ್ಯಾಯವಾಗಿ ಜಮೀನು ನೀಡಬೇಕೆಂದು ಒತ್ತಾಯಿಸಿ ಕಳೆದ ಐದು ವರ್ಷಗಳಿಂದ ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಕುಟುಂಬ ಸಮೇತ ಧರಣಿ ನಡೆಸುತ್ತಿರುವ ಮಲ್ಲಿಕಾರ್ಜುನ ಭಟಗಿ ಅವರನ್ನು ಶನಿವಾರ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ಅಧ್ಯಕ್ಷ, ಸಾಹಿತಿ ಚಂದ್ರಶೇಖರ ಪಾಟೀಲ ಭೇಟಿ ಮಾಡಿ ಅವರ ಹೋರಾಟವನ್ನು ಬೆಂಬಲಿಸಿದರು.

ಬಟಗಿ ಕುಟುಂಬವು ಕಳೆದ ಐದು ವರ್ಷಗಳಿಂದ ಅನುಭವಿಸುತ್ತಿರುವ ಯಾತನೆಯನ್ನು ತಿಳಿದುಕೊಂಡ ಪ್ರೊ.ಚಂಪಾ ಅವರು ಬಾಗಲಕೋಟೆಯಲ್ಲಿದ್ದ ಪ್ರಾದೇಶಿಕ ಆಯುಕ್ತ ಗಂಗಾರಾಮ ಬಡೇರಿಯಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಬಟಗಿ ಕುಟುಂಬಕ್ಕೆ ನ್ಯಾಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಬಟಗಿ ಕುಟುಂಬಕ್ಕೆ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಜಮೀನು ಮಂಜೂರು ಮಾಡಿ ಇದೇ ಡಿ.17 ರಂದು ಹೊರಡಿಸಿದ ಆದೇಶವನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕೆಂದು ಚಂಪಾ ಒತ್ತಾಯಿಸಿದರು. ನ್ಯಾಯ ಕೊಡದಿದ್ದಲ್ಲಿ ಹೋರಾಟ ಅನಿವಾರ್ಯ ಎನ್ನುವ ಎಚ್ಚರಿಕೆ ನೀಡಿದರು. ಬಟಗಿ ಕುಟುಂಬಕ್ಕೆ ನ್ಯಾಯ ಕಲ್ಪಿಸುವುದಾಗಿ ಭರವಸೆ ನೀಡಿದರು.

ಭೇಟಿ ಸಂದರ್ಭದಲ್ಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕರ್ನಾಟಕ ಸ್ವಾಭಿಮಾನಿ ವೇದಿಕೆಯ ಜಿಲ್ಲಾ ಸಂಚಾಲಕ ಶಂಕರ ಬಾಗೇವಾಡಿ ಹಾಜರಿದ್ದರು.

loading...

LEAVE A REPLY

Please enter your comment!
Please enter your name here