ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕ ಅವರಿಂದ ಸಾರ್ವಜನಿಕ ಕುಂದುಕೊರತೆ ದೂರು ಆಹ್ವಾನ

0
19
loading...

ಕೊಪ್ಪಳ,ಡಿ.25-: ಕೊಪ್ಪಳ ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಅವರು ಡಿ.28 ರಂದು ಯಲಬುರ್ಗಾ-ಕುಷ್ಟಗಿ ಹಾಗೂ ಡಿ.29 ರಂದು ಗಂಗಾವತಿ-ಕೊಪ್ಪಳ ಪ್ರವಾಸ ಕೈಕೊಂಡು, ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಿ ಅಹವಾಲು ಆಲಿಸುವರು.

ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಅವರು ಡಿ.28 ರಂದು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1-30 ರವರೆಗೆ ಯಲಬುರ್ಗಾ  ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2-30 ರಿಂದ ಸಂಜೆ 5-30 ರವರೆಗೆ ಕುಷ್ಟಗಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಿ, ಅವರ ಅಹವಾಲುಗಳನ್ನು ಆಲಿಸುವರು.

ಮರು ದಿನ ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರು ಅವರು ಡಿ.29 ರಂದು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1-30 ರವರೆಗೆ ಗಂಗಾವತಿಯ  ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2-30 ರಿಂದ ಸಂಜೆ 5-30 ರವರೆಗೆ ಕೊಪ್ಪಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಿ, ಅವರ ಅಹವಾಲುಗಳನ್ನು ಆಲಿಸುವರು.

ಸಾರ್ವಜನಿಕರು ತಮ್ಮ ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಲು ಕೋರಲಾಗಿದೆ.  ಅಲ್ಲದೆ ದೂರು ಸಲ್ಲಿಸಲು ಬೇಕಾಗುವ ಪ್ರಪತ್ರ ಸಂಖ್ಯೆ 1 ಮತ್ತು 2 ನಮೂನೆಯನ್ನು ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆರಕ್ಷಕ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಕೊಪ್ಪಳ, ದೂರವಾಣಿ ಸಂಖ್ಯೆ : 08539-220533 ಅಥವಾ 08539-220200 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

loading...

LEAVE A REPLY

Please enter your comment!
Please enter your name here