ಉಪ ಲೋಕಾ : ಸುಪ್ರಿಂ ತೀರ್ಪಿಗೆ ಸ್ವಾಗತ

0
1
loading...

ಬೆಂಗಳೂರು,ಜ.12-ಉಪಲೋಕಾಯುಕ್ತ ನೇಮಕ ವಿವಾದದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯ ಸರ್ಕಾರ ಮುಕ್ತವಾಗಿ ಸ್ವಾಗತಿಸಲಿದೆ ಎಂದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶೀಘ್ರವೇ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ನೇಮಕ ಮಾಡಲಾಗುವುದು ಎಂದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರೌಢಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 150ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ನ ತೀರ್ಪು ಕುರಿತಂತೆ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿದೆ ಎಂಬ ರೀತಿ ವರದಿಯಾಗಿರುವುದು ಸರಿಯಲ್ಲ ಎಂದರು. ಲೋಕಾಯುಕ್ತ ನೇಮಕ ವಿಚಾರದಲ್ಲಿ ಮುಖ್ಯಮಂತ್ರಿಗೆ ಅಧಿಕಾರವಿರಬೇಕೆಂಬ ವಾದವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಹಾಗೂ ಸಂಪುಟ ಸಭೆಯಲ್ಲಿ ಚರ್ಚಿಸಿ ಲೋಕಾಯುಕ್ತರ ನೇಮಕ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಲೋಕಾಯುಕ್ತ ನೇಮಕ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

loading...

LEAVE A REPLY

Please enter your comment!
Please enter your name here