ಮುಂಬಯಿ-ಕರ್ನಾಟಕದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸಲು ಆಗ್ರಹ

0
17
loading...

ವಿಜಾಪುರ,17- ಮುಂಬಯಿ-ಕರ್ನಾಟಕ ಪ್ರದೇಶದ ಅಭಿವೃದ್ದಿಗಾಗಿ ಮುಂಬರುವ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ವಿಜಾಪುರ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ಪೀಟರ್ ಅಲೆಕ್ಝಾಂಡರ್ ಹಾಗೂ ಉಪಾಧ್ಯಕ್ಷ ನಂದಕಿಶೋರ ರಾಠೋಡ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಹಿಂದುಳಿದ ಹೈದರಾಬಾದ್-ಕರ್ನಾಟಕ ಪ್ರದೇಶವು  ಸಂವಿಧಾನದ 371 ನೇ ಕಲಂನಡಿ ವಿಶೇಷ ಸ್ಥಾನಮಾನವನ್ನು ಪಡೆದುಕೊಂಡಿದೆ. ಆದ್ದರಿಂದ ಆ ಪ್ರದೇಶಕ್ಕೆ ಒಳಪಡುವ ಜಿಲ್ಲೆಗಳಾದ ಗುಲ್ಬರ್ಗಾ, ಬೀದರ, ಯಾದಗಿರಿ, ರಾಯಚೂರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಕೇಂದ್ರ ಸರ್ಕಾರದ ಅನುದಾನದಡಿ ಸಮಗ್ರ ಅಭಿವೃದ್ದಿ ಹೊಂದುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಮುಂಬಯಿ ಕರ್ನಾಟಕ ಪ್ರದೇಶದ ಜಿಲ್ಲೆಗಳಾದ ವಿಜಾಪುರ, ಬಾಗಲಕೋಟ, ಬೆಳಗಾಂವ, ಧಾರವಾಡ, ಹಾವೇರಿ, ಗದಗ ಮತ್ತು ಕಾರವಾರ ಜಿಲ್ಲೆಗಳು ಮಳೆ ಇಲ್ಲದೇ ಮೇಲಿಂದ ಮೇಲೆ ಬರಗಾಲಕ್ಕೆ ತುತ್ತಾಗಿ ಅಭಿವೃದ್ದಿಯಿಂದ ಹಿಂದುಳಿದಿವೆ ಎಂದು ಆರೋಪಿಸಿದ್ದಾರೆ.

ಆದ್ದರಿಂದ ಮುಖ್ಯಮಂತ್ರಿಗಳು ಭೇದ-ಭಾವ ಎನಿಸದೇ ಮುಂಬಯಿ-ಕರ್ನಾಟಕ ಪ್ರದೇಶದ ಜಿಲ್ಲೆಗಳ ಸಮಗ್ರ ಅಭಿವೃದ್ದಿಗೆ ಮುಂಬರುವ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಒದಗಿಸಿ, ಈ ಭಾಗವನ್ನು ಅಭಿವೃದ್ದಿ ಪಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

loading...

LEAVE A REPLY

Please enter your comment!
Please enter your name here