ಅಪೆಕ್ಸ್ ಬ್ಯಾಂಕ್ ನೇಮಕಾತಿ ಲೋಕಾದಿಂದ ತನಿಖೆ

0
24
loading...

15-ಬ್ಯಾಂಕ್ನ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ಕುಮಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ಶಾಸಕ ಬಾಲಕೃಷ್ಣ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದು ವೇಳೆ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವುದು ಕಂಡುಬಂದರೆ ರಾಜ್ಯಸರ್ಕಾರ ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸುವುದು ಯಾವುದೇ ಕಾರಣಕ್ಕೂ ಪ್ರತಿಭಾವಂತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅಫೆಕ್ಸ್ ಬ್ಯಾಂಕ್ ವತಿಯಿಂದ 77 ಗುಮಾಸ್ತರು ಮತ್ತು ನಗದು ಗುಮಾಸ್ತರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಲಿಖಿತ ಮತ್ತು ಮೌಖಿಕ ಪರೀಕ್ಷೆಗಳನ್ನು ನಡೆಸಿ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಬೇಕೆಂಬುದು ಅಧಿಸೂಚನೆಯಲ್ಲಿತ್ತು. ಇದರಲ್ಲಿ ಕೆಲವು ಪ್ರಭಾವಿಗಳು ಹುದ್ದೆ ಗಿಟ್ಟಿಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಲೋಕಾಯುಕ್ತರಿಂದ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.

77 ಗುಮಾಸ್ತ ಹುದ್ದೆಗಳಿಗೆ 6177 ಹಾಗೂ ನಗದು ಗುಮಾಸ್ತ ಹುದ್ದೆಗೆ 5106 ಅರ್ಜಿಗಳು ಬಂದಿದ್ದವು. ಲಿಖಿತ ಮತ್ತು ಮೌಖಿಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಲಾಗಿದೆ. ಆದರೂ ಸದಸ್ಯರು ಅವ್ಯವಹಾರ ನಡೆದಿದೆ ಎಂದು ಹೇಳಿರುವುದು ತಮಗೆ ಆಶ್ಚರ್ಯ ತಂದಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬಾಲಕೃಷ್ಣ ಮಾತನಾಡಿ, ಅಫೆಕ್ಸ್ ಬ್ಯಾಂಕ್ ನೇಮಕಾತಿಯಲ್ಲಿ ಭಾರೀ ಗೋಲ್ಮಾಲ್ ನಡೆದಿದೆ. ಹೆಚ್ಚಿನ ಅಂಕ ಗಳಿಸದವರನ್ನು ಕೈಬಿಟ್ಟು ಕಡಿಮೆ ಅಂಕ ಗಳಿಸಿದವರಿಗೆ ಹುದ್ದೆ ನೀಡಲಾಗಿದೆ. ಸಂದರ್ಶನದಲ್ಲಿ ಪ್ರತಿಭಾವಂತರನ್ನು ಕೈ ಬಿಟ್ಟು ಬೇರೊಬ್ಬರಿಗೆ ಹುದ್ದೆ ನೀಡಲಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.

 

loading...

LEAVE A REPLY

Please enter your comment!
Please enter your name here