ಕುಮಾರಸ್ವಾಮಿ ಕಾಂಗ್ರೆಸ್ ಹೈಕಮಾಂಡ್ ಅಲ್ಲ: ಸಿದ್ದು

0
14
loading...

ರಾಮದುರ್ಗ,ಫೆ.27: ಲಿಕಾಂಗ್ರೆಸ್ ಪಕ್ಷದಲ್ಲಿ ಇರುವ ತನಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಲು ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ನ ಹೈಕಮಾಂಡ್ ಅಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧೀ ಮತ್ತು ಶಾಸಕರು ನಿರ್ಧರಿಸುತ್ತಾರೆಳಿ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ರಾಮದುರ್ಗದ ಮುಳ್ಳೂರು ಘಾಟ್ನಲ್ಲಿ ಪರ್ಯಾಯ ರಸ್ತೆ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆಗೆ ಆಗಮಿಸಿದ್ದ ಅವರು ಸ್ಥಳೀಯ ಶಾಸಕ ಅಶೋಕ ಪಟ್ಟಣ ಅವರ ಮನೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದರು.

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವ ಅವಕಾಶ ತಮಗೆ ಎರಡು ಸಾರಿ ದೊರಕಿದ್ದರೂ ಉಭಯ ನಾಯಕರ ಕುತಂತ್ರದಿಂದ ಮುಖ್ಯಮಂತ್ರಿ ಸ್ಥಾನದಿಂದ ವಂಚಿತಗೊಳಿಸಿದ್ದಾರೆ ಎಂದು ದೂರಿದರು.

ಜಗದೀಶ ಶೆಟ್ಟರ್ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಕೃತಕ ಉಸಿರಾಟದಲ್ಲಿದೆ. ಕೃತಕ ಉಸಿರಾಟವನ್ನು ಯಾವುದೇ ಕ್ಷಣದಲ್ಲಿ ನಿಲ್ಲಿಸಿದರೂ ತಕ್ಷಣವೇ ಸರ್ಕಾರ ಪಥನಗೊಳ್ಳುವ ಲಕ್ಷಣಗಳಿವೆ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಸರ್ಕಾರ ಮುನ್ನಡೆದುಕೊಂಡು ಸಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬರುವ ಮುಖಂಡರಿಗೆ ಯಾವ ಮಾನದಂಡವನ್ನು ಮಾಡಲಾಗಿದೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಪಕ್ಷ ಸಂಘಟನೆಗಾಗಿ ಬರುವ ಯಾರನ್ನೇ ಆದರೂ ಪಕ್ಷದಲ್ಲಿ ಸೇರಿಸಿಕೊಳ್ಳುತ್ತೇವೆ. ಕೇವಲ ಪಕ್ಷದ ಟಿಕೆಟ್ ಕೇಳಿ ಬರುವವರಿಗೆ ಆಯಾ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಪಡೆದು ಸೇರ್ಪಡೆಗೆ ಅವಕಾಶ ನೀಡಲಾಗುವುದು. ಸೂಕ್ತ ಅಭ್ಯರ್ಥಿ ಸಿಗದೇ ಇದ್ದಾಗ ವಲಸೆ ಬರುವ ನಾಯಕರಿಗೆ ಟಿಕೆಟ್ ನೀಡಲಾಗುವುದು ಎಂದು ಸ್ಪಷ್ಟ ಪಡಿಸಿದರು. ಆಪರೇಷನ್ ಕಮಲ ಮಾಡುವ ಮೂಲಕ ಬಿಜೆಪಿ ರಾಜ್ಯದಲ್ಲಿ ಇಲ್ಲಿಯ ತನಕ ರಾಜ್ಯದ ಖಜಾನೆ ಲೂಟಿ ಹೊಡೆದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಆಪರೇಷನ್ ಕಮಲ ಮಾಡಿರುವ ನಾಯಕರು ಅನುಭವಿಸುತ್ತಿದ್ದಾರೆ

loading...

LEAVE A REPLY

Please enter your comment!
Please enter your name here