ಯಾರು ನರಿ, ಯಾರು ಹುಲಿ ಚುನಾವಣೆಯಲ್ಲಿ ಗೊತ್ತಾಗುತ್ತದೆಳಿ

0
23
loading...

ತುಮಕೂರು, ಫೆ.23- ಯಾರು ನರಿ, ಯಾರು ಹುಲಿ ಎನ್ನುವುದು ಮುಂಬರುವ ಚುನಾವಣೆಗಳಲ್ಲಿ ಗೊತ್ತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಸುಂಟರಮಳೆಯಲ್ಲಿ ಸಿದ್ದರಾಮೇಶ್ವರ ದೇಗುಲ ಜೀರ್ಣೌದ್ದಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರದ ಅವಧಿಯಲ್ಲಿ 700 ಕೋಟಿ ರೂ. ಅನುದಾನ ಪಡೆಯುವಾಗ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ಗೌಡ ಅವರಿಗೆ ನಾಯಿ ಮತ್ತು ನರಿಗಳ ಅರಿವಿರಲಿಲ್ಲವೆ ಎಂದು ಆಕ್ರೌಶ ವ್ಯಕ್ತಪಡಿಸಿದರು.

ಇತ್ತೀಚೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸುರೇಶ್ಗೌಡ ಪಕ್ಷ ಬಿಡುವವರೆಲ್ಲ ನಾಯಿ-ನರಿಗಳು ಎಂದು ಛೇಡಿಸಿದ್ದರು. ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ನಿಷ್ಠೆ ಮತ್ತು ಪ್ರಾಮಾಣಿಕತೆ ಇಲ್ಲದೆ ಸುರೇಶ್ಗೌಡ ಇಂತಹ ಮಾತುಗಳನ್ನಾಡುತ್ತಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸಲಿದ್ದಾರೆ ಎಂದರು.

loading...

LEAVE A REPLY

Please enter your comment!
Please enter your name here