ನೆಲೆ ಕಳೆದುಕೊಂಡ ನಾಯಕರು

0
18
loading...

ಬೆಂಗಳೂರು,11-ಕಳೆದ ದಿ.7ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಫಲಿತಾಂಶದಲ್ಲಿ ಹಲವು ನಾಯಕರು ತಮ್ಮ ಸ್ವಂತ ಕ್ಷೇತ್ರಗಳಲ್ಲಿ ನೆಲೆ ಕಳೆದುಕೊಂಡ ಅಚ್ಚರಿಯ ಘಟನೆಗಳು ನಡೆದಿವೆ.

ರಾಜ್ಯದಲ್ಲಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದು ತಾವೇ ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ತ್ಮಮ ಮನೆಯಿರುವ ವಾರ್ಡ್ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಅದೇ ರೀತಿ ಗಣಿ ದೊರೆಗಳ ಆಡಳಿತದ ಸಮಯದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಭಾಜಪ ರಾಜ್ಯ ಕಟ್ಟಿದದ ಪ್ರಮುಖ ನಾಯಕ ಹಾಗೂ ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಶ್ರೀರಾಮುಲು ಬಳ್ಳಾರಿಯಲ್ಲಿಯೇ ತಮ್ಮ ಫ್ಯಾನು ತಿರುಗಿಸುವಲ್ಲಿ ವಿಫಲರಾಗಿದ್ದಾರೆ. ಅದೇ ರೀತಿ ಇದುವರೆಗೆ ಭಾಜಪ ರಾಜ್ಯಾಧ್ಯಕ್ಷರಾಗಿದ್ದ ಕೆ.ಎಸ್.ಈಶ್ವರಪ್ಪ ತಾವು ಪ್ರತಿನಿಧಿಸುತ್ತಿರುವ ಶೀವಮೊಗ್ಗದಲ್ಲಿ ಕಮಲ ಅರಳಿಸುವುದರಲ್ಲಿ ವಿಫಲರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ರಸ್.ಎಂ.ಕೃಷ್ಣ ತ್ಮಮ ಸ್ವಂತ ಕ್ಷೇತ್ರ ಮದ್ದೂರಲ್ಲಿ ತಮ್ಮ ಪಕ್ಷಕ್ಕೆ ಗೆಲುವು ತಂದುಕೊಡುವಲ್ಲಿ ವಿಫಲರಾಗಿದ್ದಾರೆ.ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಕಾರ್ಯಕ್ಷೇತ್ರವಾದ ರಾಮನಗರದಲ್ಲಿ ಪಕ್ಷ ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ ಹುಬ್ಬಳ್ಳಿ ಧಾರವಾಡ ನಗರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರೂ ಸಹ ತಮ್ ಪಕ್ಷಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಸಭೆಯಲ್ಲಿ ಸರಳ ಬಹುಮತ ತಂದು ಕೊಡುವಲ್ಲಿ ವಿಫಲರಾಗಿದ್ದರೆ.

ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಡಿ.ವಿಸದಾನಂದಗೌಡ ತಮ್ಮ ವಾರ್ಡ್ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲಲಿಸುವಲ್ಲಿ ವಿಫಲರಾಗಿದ್ದಾರೆ. ಈ ರೀತಿ ದೊಡ್ಡ ದೊಡ್ಡ ನಾಯಕರು ತಮ್ಮ ಮನೆಗಳಲ್ಲಿಯೇ ಸೋಲು ಅನುಭವಿಸಿರುವುದು ಈ ಚುನಾವಣೆಯ ವೈಶಿಷ್ಟ್ಯವಾಗಿದೆ.

loading...

LEAVE A REPLY

Please enter your comment!
Please enter your name here