ಜಲ ಸಂಪನ್ಮೂಲ ಸಚಿವರಾಗಿ ಎಂ.ಬಿ.ಪಾಟೀಲ

0
26
loading...

ವಿಧಾನಸಭೆಯ ಕಛೇರಿಯಲ್ಲಿ ಅಧಿಕಾರ ಸ್ವೀಕಾರ

ಬೆಂಗಳೂರು,20-ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ವಿಧಾನಸಭೆಯ 3ನೇ ಮಹಡಿಯ ಕೊಠಡಿ ಸಂಖ್ಯೆ 344ರಲ್ಲಿ (ಹೈಕೋರ್ಟ ಎದುರಿಗೆ) ದಂಪತಿ ಸಮೇತ ಸಾಂಪ್ರದಾಯಕ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕೃಷ್ಣಾ-ಕಾವೇರಿ ಜಲಾನಯನ ಪ್ರದೇಶಗಳು ಕರ್ನಾಟಕದ ಎರಡು ಕಣ್ಣುಗಳು, ಇಲ್ಲಿರುವ ಎಲ್ಲ ಸಮಸ್ಯೆಗಳಿಗೆ ಶಾಸ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹಿಂದುಳಿದ ವಿಜಾಪುರ ಜಿಲ್ಲೆಗೆ ಪ್ರಥಮ ಬಾರಿಗೆ ಜಲ ಸಂಪನ್ಮೂಲ ಸಚಿವರಾಗುವ ಯೋಗ ಕೂಡಿ ಬಂದಿದೆ. ಸೋನಿಯಾಗಾಂಧಿಯವರು, ಸಿದ್ದರಾಮಯ್ಯನವರು ನನ್ನ ಮೇಲೆ ವಿಶ್ವಾಸವಿರಿಸಿ ಈ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದಾರೆ. ಈ ಖಾತೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ಅವರು, ಹಿಂದೆ ಈ ಖಾತೆಯನ್ನು ನಿರ್ವಹಿಸಿದ ಎಚ್.ಕೆ.ಪಾಟೀಲ, ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಅವರ ಮಾರ್ಗದರ್ಶವನ್ನು ಪಡೆಯಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ರಾಜು ಆಲಗೂರ, ರಾಜಶೇಖರ ಪಾಟೀಲ ಹುಮನಾಬಾದ, ಕೆ.ಬಿ.ಜೆ.ಎನ್.ಎಲ್. ವ್ಯವಸ್ಥಾಪಕ ನಿರ್ದೇಶಕ ಕಪೀಲ ಮೋಹನ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ವಿಜಾಪುರ ಜಿಲ್ಲೆಯ ಮುಖಂಡರುಗಳು ಉಪಸ್ಥಿತರಿದ್ದರು

loading...

LEAVE A REPLY

Please enter your comment!
Please enter your name here