ಇಂದು ವಿಶ್ವ ರಕ್ತದಾನ ದಿನಾಚರಣೆ ಮತ್ತು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

0
20
loading...

ಬಾಗಲಕೋಟ ,13-: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಶಸ್ತ್ತ್ರ ಚಿಕಿತ್ಸಕರು, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ  ನಿಯಂತ್ರಣ ಘಟಕ, ಜಮಖಂಡಿ ತಾಲೂಕ ಆರೋಗ್ಯ ಅಧಿಕಾರಿಗಳು, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜೂನ್ 14 ರಂದು ರಕ್ತದಾನ ಮಾಡಿ ಜೀವದಾನದ ಕೊಡುಗೆ ನೀಡಿ ಎಂಬ ಘೋಷಣೆಯೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆ ಮತ್ತು ಜಾಥಾ, ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜಮಖಂಡಿ ತಾಲೂಕಿನ ಹುನ್ನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ರ ವರೆಗೆ ಜರುಗಲಿದೆ.

ಜಾಥಾವು ಜಮಖಂಡಿಯ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಿಂದ ಎ.ಜಿ.ದೇಸಾಯಿ ವೃತ್ತದವರೆಗೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೇಷನ್ ಸೊಸೈಟಿ ಬೆಂಗಳೂರು ಇವರಿಂದ ಆಗಮಿಸುವ ರಕ್ತದಾನ ಸಂಚಾರಿ ಬಸ್ಸೊಂದಿಗೆ ಮಾಧ್ಯಮಗಳೊಂದಿಗೆ ಜನಜಾಗೃತಿ ಜಾಥಾ ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಪ್ರೇರಿತರಾಗಿ ಬಂದು ಹೆಚ್ಚು ಸಲ ರಕ್ತದಾನ ಮಾಡಿದವರಿಗೆ ಸನ್ಮಾನ ಸಮಾರಂಭ ನಡೆಯಲಿದೆಯೆಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ತಿಳಿಸಿದ್ದಾರೆ

loading...

LEAVE A REPLY

Please enter your comment!
Please enter your name here