ಹಿರಿಯ ನಾಗರಿಕರಿಗೆ ಸಹಾಯವಾಣಿ

0
22
loading...

ಜಿಲ್ಲಾ ಕೇಂದ್ರಗಳಲ್ಲಿ

 

ಪ್ರತಿ ಕೇಂದ್ರಕ್ಕೆ 3.60 ಲಕ್ಷ ರೂ. ಅನುದಾನವನ್ನು 2013ರ ಆಗಸ್ಟ್ವರೆಗೆ ನೀಡಲಾಗುತ್ತಿತ್ತು

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ನಲ್ಲಿ ಅನುದಾನ ಹೆಚ್ಚಿಸಿದ್ದು, ಈ ತಿಂಗಳಿನಿಂದ 7.15 ಲಕ್ಷ ರೂ. ಗಳನ್ನು ನೀಡಲಾಗುತ್ತಿದೆ.

 

16 ಜಿಲ್ಲೆಗಳಲ್ಲಿ ಮಹಿಳಾ ಸಹಾಯವಾಣಿ ಕೇಂದ್ರಗಳನ್ನು ಪ್ರಾರಂಭಿಸಲು ಚಿಂತನೆ

 

ಬೆಂಗಳೂರು, ಸೆ.23-ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕ್ಕತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.

ನಗರದ ಕಂಠೀರವ ಸ್ಟೇಡಿಯಂನಲ್ಲಿಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಹಿರಿಯ ನಾಗರಿಕರ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದ ಅವರು, ಜಿಲ್ಲಾ ಕೇಂದ್ರಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಯವರ ಸಹಯೋಗದಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾಂ, ಗುಲ್ಬರ್ಗ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ಬಾಗಲಕೋಟೆ, ಬೀದರ್, ತುಮಕೂರು, ಕೋಲಾರ ಮತ್ತು ಬಿಜಾಪುರಗಳಲ್ಲಿ ಸಹಾಯವಾಣಿಗಳು ಕೆಲಸ ಮಾಡುತ್ತಿವೆ ಎಂದರು.

ಪ್ರತಿ ಕೇಂದ್ರಕ್ಕೆ 3.60 ಲಕ್ಷ ರೂ. ಅನುದಾನವನ್ನು 2013ರ ಆಗಸ್ಟ್ವರೆಗೆ ನೀಡಲಾಗುತ್ತಿತ್ತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ನಲ್ಲಿ ಅನುದಾನ ಹೆಚ್ಚಿಸಿದ್ದು, ಈ ತಿಂಗಳಿನಿಂದ 7.15 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಉಳಿದ ಜಿಲ್ಲೆಗಳಲ್ಲೂ ಶೀಘ್ರವೇ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗುವುದು.

ಜತೆಗೆ 16 ಜಿಲ್ಲೆಗಳಲ್ಲಿ ಮಹಿಳಾ ಸಹಾಯವಾಣಿ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದರು.

 

 

 

 

 

 

 

 

 

 

 

 

 

loading...

LEAVE A REPLY

Please enter your comment!
Please enter your name here