ಪೊಲೀಸ್ ತರಬೇತಿ ಶಾಲೆಯಲ್ಲಿ ಪುನಶ್ಚೇತನ ಕಾರ್ಯಾಗಾರ

0
13
loading...

ಖಾನಾಪುರ 3: ಪಟ್ಟಣದ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ ಬೆಳಗಾವಿ ವಲಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಎಎಸ್ಐ ಹಾಗೂ ಹೆಡ್ ಕಾನ್ಸ್ಸ್ಟೇಬಲ್ಸ್ಗಳ ಒಂದು ವಾರದ ಪುನಶ್ಚೇತನ ಕಾರ್ಯಾಗಾರ ಜರುಗಿತು. ತರಬೇತಿ ಶಾಲೆಯ ಪ್ರಾಂಶುಪಾಲ ಎಸ್.ಜಿ ಓತಗೇರಿ ತರಬೇತಿ ಪಡೆಯಲು ಆಗಮಿಸಿದ್ದ ಪೊಲೀಸ್ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿ, ಇಲಾಖೆಯಲ್ಲಿ ದೈನಂದಿನ ಬಿಡುವಿಲ್ಲದ ಕೆಲಸಕಾರ್ಯಗಳ ನಡುವೆ ವಿವಿಧ ಹೊಸ ವಿಷಯಗಳ ಬಗ್ಗೆ ಮಾಹಿತಿ ನೀಡುವ ಪುನಶ್ಚೇತನ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಮನಸ್ಸಿಗೆ ಶಾಂತಿ ದೊರೆಯುತ್ತದೆ.

ಈ ಶಿಬಿರದಲ್ಲಿ ಪಡೆದ ಜ್ಞಾನವನ್ನು ತಮ್ಮ ವೃತ್ತಿ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ತರಬೇತಿಯಲ್ಲಿ ಬೆಳಗಾವಿ ಜಿಲ್ಲೆಯ 21, ಬಾಗಲಕೋಟ-53, ಹುಬ್ಬಳ್ಳಿ-ಧಾರವಾಡ ಕಮೀಷರೇಟ್-34, ಹಾವೇರಿ-38, ಧಾರವಾಡ-2 ಹಾಗೂ ಗದಗ ಜಿಲ್ಲೆಯ 2 ಸೇರಿದಂತೆ ಒಟ್ಟು 150 ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ತರಬೇತಿಯ ಅವಧಿಯಲ್ಲಿ ಯೋಗ, ಪೊಲೀಸ್ ಇಲಾಖೆಯಲ್ಲಿ ಹೊಸದಾಗಿ ಸೇರ್ಪಡೆಯಾದ ವಿಷಯಗಳ ಬಗ್ಗೆ ಹಾಗೂ ಆರೋಗ್ಯದ ಬಗ್ಗೆ ಬೆಳಗಾವಿ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞವೈದ್ಯರು ಹಾಗೂ ವಿವಿಧ ಪರಿಣಿತರಿಂದ ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಲಾಯಿತು

loading...

LEAVE A REPLY

Please enter your comment!
Please enter your name here