ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಿಬಿರ

0
16
loading...

ಖಾನಾಪುರ,ಜ.1: ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ತಾಲೂಕಿನ ಅನುದಾನಿತ, ಸರಕಾರಿ ಹಾಗೂ ಖಾಸಗಿ ಸೇರಿದಂತೆ ವಿವಿಧ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಮಾರ್ಗದರ್ಶನ ಶಿಬಿರ ಹಾಗೂ ವಿಜ್ಞಾನ ಪ್ರದರ್ಶನವನ್ನು ಗುರುವಾರ ಜ.2ರಂದು ಮುಂಜಾನೆ 10ಕ್ಕೆ ಆಯೋಜಿಸಲಾಗಿದೆ.

ಧಾರವಾಡದ ಕ್ಯಾಪ್ಟನ್ ಆನಂದ, ಕ್ಷೇತ್ರ ಶಿಕ್ಷಣಾಧಿಕಾರಿ ವಿನೋದ ನಾಯ್ಕ, ಬೆಳಗಾವಿಯ ಜಿಎಸ್ಎಸ್ ಕಾಲೇಜಿನ ಉಪನ್ಯಾಸಕ ಭರತ ತೋಪಿನಕಟ್ಟಿ, ಸಂಪನ್ಮೂಲ ವ್ಯಕ್ತಿ ಎನ್.ಕೆ ಕಾಳೆ ಮತ್ತು ವಿವಿಧ ವಿಷಯಗಳ ಪರಿಣಿತರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಬೋಧನೆ ಮಾಡಲಿದ್ದಾರೆ.  ಈ ಸಂದರ್ಭದಲ್ಲಿ ವಿಜ್ಞಾನದ ಮಾದರಿಗಳ ಪ್ರದರ್ಶನವನ್ನು ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದು, ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮುಖ್ಯೌಪಾಧ್ಯಾಯರು, ಶಿಕ್ಷಕರು ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬೇಕೆಂದು ಶಾಂತಿನಿಕೇತನ ಶಾಲೆಯ ಪ್ರಾಚಾರ್ಯರಾದ ಆಶಾ ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here