ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯ : ಪಾಟೀಲ

0
79
loading...

ರಾಮದುರ್ಗ : 12 ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಕಾನೂನು ಕ್ರಮದಿಂದ ಸಾಧ್ಯವಿಲ್ಲ ಜನರಲ್ಲಿ ಜಾಗೃತಿ ಮೂಡಿಸಿ ನಿರ್ಮೂಲನೆಗೆ ಮುಂದಾಗಬೇಕು ಅಂದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಬಹುದು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಎಂ. ಬಿ. ಪಾಟೀಲ ಹೇಳಿದರು.
ಗುರುವಾರ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ತಾಲೂಕಾ ಆಡಳಿತ, ಕಾನೂನು ನೇರವು ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸುವದು ಕಾನೂನು ಬಾಹೀರವಾಗಿದೆ ಎಂದು ಹೇಳಿದ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಸರ್ಕಾರದಿಂದ ಸಾಧ್ಯವಿಲ್ಲ ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು.
ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಆರ್ಥಿಕ ಭದ್ರತೆ ನೀಡುವ ಮೂಲಕ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳೀದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಂಜುನಾಥ ಮಾತನಾಡಿ ದೇಶದ ಉತ್ತಮ ಪ್ರಜೆಗಳ ನಿರ್ಮಾಣ ಮಾಡಲು ಮೊದಲು ಬಾಲಕಾರ್ಮಿಕ ಪದ್ಧತಿ ಹೊಡೆದೊಡಿಸಬೇಕು ಎಂದು ಹೇಳಿದರಲ್ಲದೆ ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಜೆ. ಅಂಚಿ ಮಾತನಾಡಿ ಸರ್ಕಾರ 14 ವರ್ಷದ ವರೆಗೆ ಉಚಿತ ಶಿಕ್ಷಣ ನೀಡುತ್ತಿದೆ ಅಲ್ಲದೆ ಕಡ್ಡಾಯ ಶಿಕ್ಷಣ ಕಾಯ್ದೆ ಜಾರಿಗೆ ತಂದಿದೆ ಇದರಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಿದೆ ಆದರೆ ಸರ್ಕಾರದ ಯೋಜನೆಗಳ ಬ್ಗೆ ಜಾಗೃತಿ ಮೂಡಿಸುವ ಕೆಸಲಸವಾಗಬೇಕಿದೆ ಎಂಧು ಹೇಳಿದರು.
ಕಾರ್ಮಿಕ ಅಧಿಕಾರಿ ರಮೇಶ ಹೆಸರೂರು ಬಾಲಕಾರ್ಮಿಕ ಪದ್ಧತಿಯ ಪ್ರೌತ್ಸಾಹ ನೀಡುವವರ ವಿರುದ್ದ ತೆಗೆದುಕೊಳ್ಳಬೇಕಾದ ಕ್ರಮಗಳು, ನಿಯಂತ್ರಣಕ್ಕೆ ಇಲಾಖೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ನ್ಯಾಯವಾದಿ ಆರ್. ಜಿ. ವಜ್ಜರಮಟ್ಟಿ ಮಾತನಾಡಿ ಸದೃಡ ದೇಶಕ್ಕಾಗಿ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಬೇಕು ಇಲ್ಲದಿದ್ದರೆ ರೋಗಗ್ರಸ್ಥ ದೇಶವಾಗುವದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.
ಕಿರಿಯ ಶ್ರೇಣಿ ನ್ಯಾಯಾಧೀಶೆ ಪ್ರೇಮಾ ಪವಾರ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ ತುಕಾರಾಮ ದಾಸರ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಭೋಧಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ವಿ. ಎಸ್. ಇಟಗಿ, ಎಜಿಪಿ ಸಿ. ಬಿ. ಹಲ್ಯಾಳ, ಆರ್. ಐ ಕೆರೂರ ಮಾತನಾಡಿದರು.
ಜಿ. ಪಿ. ಕೊಳ್ಳಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಆರ್. ಸಿ. ರಾಠೋಡ ನಿರೂಪಿಸಿದರು. ಖಾದರಬೀ ವಂದಿಸಿದರು.
ಗುರುವಾರ ರಾಮದುರ್ಗದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ನ್ಯಾಯಾಧೀಶ ಎಂ. ಬಿ. ಪಾಟೀಲ ಉದ್ಘಾಟಿಸಿದರು.

 

loading...

LEAVE A REPLY

Please enter your comment!
Please enter your name here