ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

0
53
loading...

ಬೆಂಗಳೂರು : 30 ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭ ಜುಲೈ 1 ರಂದು ಜೆ.ಪಿ.ನಗರದ ಸೋಮೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದು ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ವಹಿಸಲಿದ್ದಾರೆ. ಮಾಜಿ ಮುಖ್ಯ ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಜಗದೀಶ ಶೆಟ್ಟರ್ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ.

          ಮುಖ್ಯ ಅತಿಥಿಗಳಾಗಿ ದಕ್ಷಿಣ ಕ್ಷೇತ್ರದ ಶಾಸಕ ಎ.ಕೃಷ್ಣಪ್ಪ, ಬಿ.ಬಿ.ಎಂ.ಪಿ.ಸದಸ್ಯೆ ಶಶಿರೇಖಾ ಜಯರಾಮ್, ಅ.ಭಾ.ವೀರಶ್ಯವ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಸ್.ವಾಗೀಶ ಪ್ರಸಾದ ಭಾಗವಹಿಸಲಿದ್ದು ಎಸಳೂರಿನ ತೆಂಕಲಗೂಡು ಬೃಹನ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಉಪದೇಶಾಮೃತ ನೀಡುವರು. ನೇತೃತ್ವವನ್ನು ಅ.ಭಾ.ವೀರಶೈವ ಸಂಸ್ಥೆ ಅಧ್ಯಕ್ಷರಾದ ಕಲಾದಗಿ ಶ್ರೀ ಚಂದ್ರಶೇಖರ ಶಿವಾಚಾರ್ಯರು ವಹಿಸಲಿದ್ದಾರೆ. ಪ್ರೊ. ಮಮತಾ ಸಾಲಿಮಠ ಉಪನ್ಯಾಸ ನೀಡಲಿರುವರು.

          ಈ ಸಮಾರಂಭದಲ್ಲಿ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಮದ್ವೀರಶೈವ ಸದ್ಬೌಧನ ಸಂಸ್ಥೆ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬೀರೂರು ಶಿವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here