ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ದಿಗೆ ಮಾರಕ

0
68
loading...

Janasnkya hechala abivrudige maraka1

ಹಾವೇರಿ : 11 ದೇಶದಲ್ಲಿ ಜನಸಂಖ್ಯೆ ಸ್ಪೋಟದಿಂದ ಈಗಾಗಲೇ ಸಾಕಷ್ಟು ದುಷ್ಪರಿಣಾಮಗಳು ಗೋಚರಿಸುತ್ತಿದ್ದು, ಜನಸಂಖ್ಯೆ ಹೆಚ್ಚಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಕೈಕೊಂಡಿದೆಯೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಅವರು ಹೇಳಿದರು.

ಅವರು ಇಂದು ನಗರದ ಶ್ರೀ ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಇಲಾಖೆ ಹಾಗೂ ಶ್ರೀ ಶಿವಲಿಂಗೇಶ್ವರ ಮಹಿಳಾ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ಜನಸಂಖ್ಯಾ ದಿನಾಚರಣೆ ಜುಲೈ-11ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜನಸಂಖ್ಯಾ ಸ್ಪೌಟದಿಂದ ಆಹಾರ, ನೀರು, ಬಟ್ಟೆ, ವಸತಿ ಅಭಾವ, ಅರಣ್ಯ ನಾಶ ಹಾಗೂ ಬಡತನ ಹೆಚ್ಚಳವಾಗುವುದು. ನಿರುದ್ಯೋಗ, ಶಿಕ್ಷಣ ಆರೋಗ್ಯ ಸೇವೆಗಳು ಮತ್ತು ಇತರೆ ಸಂಪನ್ಮೂಲಗಳ ಕೊರೆತೆಯುಂಟಾಗುತ್ತದೆ. ವಾಯು, ಜಲ ಮತ್ತು ಶಬ್ದ ಮಾಲಿನ್ಯದಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗುತ್ತದೆ.
ಮದುವೆಯಾಗಲು ಗಂಡಿಗೆ 21 ವರ್ಷ ಹಾಗೂ ಹೆಣ್ಣಿಗೆ 18 ವರ್ಷ ತುಂಬಿರಬೇಕು. ಮದುವೆಯಾದ ನಂತರ ಕನಿಷ್ಠ ಮೂರು ವರ್ಷಗಳವರೆಗೂ ಮೊದಲನೆಯ ಮಗುವನ್ನು ಪಡೆಯಬಾರದು. ಮೊದಲನೆ ಮಗುವಿಗೆ ಹಾಗೂ ಎರಡನೇ ಮಗುವಿಗೆ ಕಡೇಪಕ್ಷ ನಾಲ್ಕು ವರ್ಷಗಳ ಅಂತರವಿರಬೇಕು. ಎಲ್ಲಾ ದಂಪತಿಗಳು ಕುಟುಂಬ ಕಲ್ಯಾಣ ಯೋಜನೆಗಳನ್ನು ಅನುಸರಿಸಿ ಚಿಕ್ಕ ಕುಟುಂಬವನ್ನು ಹೊಂದಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸವಿತಾ ಹಿರೇಮಠ ಅವರು ಮಾತನಾಡಿ, ಜನಸಂಖ್ಯಾ ಸ್ಪೋಟದಿಂದಾಗುವ ತೊಂದರೆಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ಅತ್ಯಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ ಪ್ರಭಾರ ಶಸ್ತ್ರ ಚಿಕಿತ್ಸ ಡಾ. ಮಾಷಾಳ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮದನ ಘೋಡಕೆ, ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಡಾ.ಭಾಗೀರಥಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಪ್ರಾಂಶುಪಾಲ ಕನಿಗೇರಿ ಅವರು ಉಪಸ್ಥಿತರಿದ್ದರು.
ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಅರ್ಥಸ್ತ್ರದ ಉಪನ್ಯಾಸಕಿ ಪ್ರೊ.ವಿದ್ಯಾ ಟಿ.ಎಚ್. ಅವರು ಜನಸಂಖ್ಯಾ ದಿನಾಚರಣೆ ಬಗ್ಗೆ ಉಪನ್ಯಾಸ ನೀಡಿದರು.
ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಡಿ.ಬಿ.ಮೂಲಿಮನಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಎಂ.ಎಫ್.ಕುರುವಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಜಾಥಾ: ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಜಾಥಾಕ್ಕೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಅವರು ಚಾಲನೆ ನೀಡಿದರು.

loading...

LEAVE A REPLY

Please enter your comment!
Please enter your name here