ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

0
24
loading...

ಹಾವೇರಿ : 11 ಹಾವೇರಿ ಜಿಲ್ಲಾ ಪಂಚಾಯತಿಗೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಕಸ್ತೂರೆವ್ವ ಶಂಭು ವಡ್ಡರ(ಅನುಸೂಚಿತ ಜಾತಿ) ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತವ್ವ ಆನಂದಪ್ಪ ಹಾದಿಮನಿ(ಹಿಂದುಳಿದ ವರ್ಗ-ಅ) ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಧ ವಿ.ಬಿ.ಪಾಟೀಲ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿ.ಪಂ.ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಂತರ ಈ ವಿಷಯ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ.ಆಂಜನಪ್ಪ ಹಾಗೂ ಅಪರ ಜಿಲ್ಲಾಧಿಕಾರಿ ಶಶಿಧರ್ ಕುರೇರ ಅವರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here