ವಿಚಾರಣಾಧೀನ ಕೈದಿ ನೇಣಿಗೆ ಶರಣು

0
13
loading...

ಬೆಳಗಾವಿ : 26 ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ವಿಚಾರಾಧೀನ ಕೈದಿಯೋರ್ವ ಜೈಲಿನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಬೆಳಗ್ಗೆ ಜೈಲಿನಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಮಳ್ಳೋಳ್ಳಿ ಗ್ರಾಮದ ಅಬ್ದುಲ್ಸಾಾಬ್ ಮೌಲಾಸಾಬ್ ನದಾಪ್ (28) ಆತ್ಮಹತ್ಯೆ ಮಾಡಿಕೊಂಡ ಕೈದಿಯಾಗಿದ್ದಾನೆ. ಕೆಲ ವರ್ಷಗಳ ಹಿಂದೆ ರಾಮದುರ್ಗ ತಾಲೂಕಿನಲ್ಲಿ ನಡೆದ ದಾಯಾದಿ ಕಲಹದ ಕೊಲೆ ಪ್ರಕರಣದಲ್ಲಿ ಅಬ್ದುಲ್ಸಾದಬ್ ಬಂಧನಕ್ಕೊಳಗಾಗಿ ರಾಮದುರ್ಗ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿದ್ದ. ಕಳೆದ 45 ದಿನಗಳ ಹಿಂದೆ ಹೆಚ್ಚಿನ ವಿಚಾರಣೆಗಾಗಿ ಹಿಂಡಲಗಾ ಕಾರಾಗೃಹಕ್ಕೆ ಈತನನ್ನು ಸ್ಥಳಾಂತರಿಸಲಾಗಿತ್ತು. ಸೆಷನ್ ನ್ಯಾಯಾಲಯದಲ್ಲಿ ವಿಚಾರಣೆ ಕೂಡ ಜಾರಿಯಲ್ಲಿತ್ತು.
ಇದೇ ಕೊಲೆ ಪ್ರಕರಣದಲ್ಲಿ ಅಬ್ದುಲ್ಸಾಲಬ್ ಸಹೋದರ ಸೈದುಸಾಬ್ ಫಕೀರ್ಸಾಲಬ್ ನದಾಪ್ನಹನ್ನು ಕೂಡಾ ಬಂಧಿಸಿ ವಿಚಾರಣೆಗೊಳಪಡಿಸಲಾಗಿತ್ತು. ಕೊಲೆ ಪ್ರಕರಣದಲ್ಲಿ ಸಹೋದರರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಶನಿವಾರ ಬೆಳಿಗ್ಗೆ ಕಾರಾಗೃಹದ ಶೌಚಾಲಯದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತ ಪರೀಕ್ಷೆಗಾಗಿ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಕುರಿತು ನ್ಯಾಯಾಧೀಶರ ವಿಚಾರಣೆ ನಂತರ ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಕಾರಾಗೃಹದ ಅಧೀಕ್ಷಕ ಕೃಷ್ಣಕುಮಾರ ಮಾಹಿತಿ ನೀಡಿದರು.

loading...

LEAVE A REPLY

Please enter your comment!
Please enter your name here