ಯುವ ಜನತೆ ದೇಶದ ಸಂಪತ್ತು -ಜಾವೀದ ಜಮಾದಾರ

0
149
loading...

ವಿಜಾಪುರ : 12 ಯುವಜನತೆ ದೇಶದ ನಿಜವಾದ ಸಂಪತ್ತು. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕøತ ಹಾಗೂ ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಜಾವೀದ ಜಮಾದಾರ ಹೇಳಿದರು.
ಅವರು ನಗರದ ಡಾ. ಬಿ.ಆರ್. ಅಂಬೇಡ್ಕರ ಕ್ರೀಡಾಂಗಣದ ಸಭಾಭವನದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಮಂತ್ರಾಲಯ, ನೆಹರು ಯುವ ಕೇಂದ್ರ ವಿಜಾಪುರ ಹಾಗೂ ಬಸವ ಸಾಹಿತ್ಯ ವೇದಿಕೆ ಆಹೇರಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಯುವಕರು ಶೈಕ್ಷಣಿಕವಾಗಿ ಮುಂದೆ ಬರುವ ಜೊತೆಗೆ ದೇಶದ ಅಭಿವೃದ್ದಿಗಾಗಿ ಶ್ರಮಿಸಬೇಕು. ಇಂದಿನ ಯುವಕರು ದೇಶದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಲ್ಲಿ ಪಾಲ್ಗೊಳ್ಳುತ್ತಿರುವದು ದುರದೃಷ್ಟಕರ ಸಂಗತಿಯಾಗಿದೆ. ದೇಶದ ಐಕ್ಯತೆ, ಸಮಗ್ರತೆ ಹಾಗೂ ಸುರಕ್ಷತೆಯನ್ನು ಕಾಪಾಡಿಕೊಂಡು ಬರುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಇಂಡಿಯನ್ ರಿಜರ್ವ ಪೋಲಿಸ್ ಬಟಾಲಿಯನ್ ಸಹಾಯಕ ಕಮಾಂಡೆಂಟ ಎಸ್. ನಾರಾಯಣಸ್ವಾಮಿ ಮಾತನಾಡಿ, ಯುವಶಕ್ತಿ ನಮ್ಮ ರಾಷ್ಟ್ರದ ಶಕ್ತಿ ಆದ್ದರಿಂದ ಪ್ರತಿಯೊಬ್ಬ ಯುವಕರು ದೇಶದ ಪ್ರಗತಿಯಲ್ಲಿ ತೊಡಗುವುದರೊಂದಿಗೆ ದೇಶಕ್ಕಾಗಿ ಹಾಗೂ ಸಮಾಜಕ್ಕಾಗಿ ತಮ್ಮದೆಯಾದ ಕೊಡುಗೆಯನ್ನು ನೀಡಬೇಕು ಎಂದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಸಿಕ್ಯಾಬ ಮಹಿಳಾ ಕಾಲೇಜಿನ ಉಪನ್ಯಾಸಕ ಪ್ರೊ. ಯು.ಎನ್. ಕುಂಟೋಜಿ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಆಟ ಪಾಠಗಳಲ್ಲಿ ಭಾಗವಹಿಸುವದರೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಶ್ರೀಧರ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರ ಯುವಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರ ನಿರುದ್ಯೋಗವನ್ನು ಹೋಗಲಾಡಿಸಲು ಯುವಕರಿಗೆ ಇನ್ನಿತರ ಹೊಸ ಯೋಜನೆಗಳನ್ನು ಜಾರಿಗೆ ತರಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಜೈವಿಕ ಇಂಧನದ ಜಿಲ್ಲಾ ಸಂಯೋಜಕ ಬಾಬು ಸಜ್ಜನ, ಬಸವ ಸಾಹಿತ್ಯ ವೇದಿಕೆ ಅಧ್ಯಕ್ಷ ಬಂಡೆಪ್ಪ ತೇಲಿ, ಕಿರಣಕುಮಾರ ಅಳಗಿಕರ ಉಪಸ್ಥಿತರಿದ್ದರು.
ಪ್ರೋ. ಶರಣಗೌಡ ಪಾಟೀಲ ಸ್ವಾಗತಿಸಿದರು. ಚಂದ್ರಶೇಖರ ಆಲಮೇಲಕರ ನಿರೂಪಿಸಿದರು. ಶ್ರೀನಿವಾಸ ಹಳ್ಳಿ ವಂದಿಸಿದರು.

loading...

LEAVE A REPLY

Please enter your comment!
Please enter your name here